LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹಾಲಿ ಮತದಾರರ ಪಟ್ಟಿಯಿಂದ 1 ಕೋಟಿ ಮತದಾರರು ಡಿಲೀಟ್ 

Advertisement

ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಶುಕ್ರವಾರದ ಅಂತ್ಯದ ವೇಳೆಗೆ 98.73 ಲಕ್ಷ ಮತದಾರರು ಹಾಲಿ ಮತದಾರರ ಪಟ್ಟಿಯಿಂದ ಡಿಲೀಟ್ ಆಗಲಿದ್ದಾರೆ.

ಆಗಸ್ಟ್ 8ರ ವೇಳೆಗೆ ಈ ಮತದಾರರ ಸಂಖ್ಯೆ ಒಂದು ಕೋಟಿ ದಾಟುವ ಸಾಧ್ಯತೆ ಇದೆ.ರಾಜ್ಯದಲ್ಲಿ ಇದುವರೆಗಿನ ಎಸ್‌ಐಆರ್ ಪ್ರಕ್ರಿಯೆಯಲ್ಲಿ 98.73 ಲಕ್ಷ ಮತದಾರರನ್ನು ಎ.ಎಸ್.ಡಿ.ಡಿ.ಓ. ಮತದಾರರು ಎಂದು ಗುರುತಿಸಲಾಗಿದೆ.

ಈ ಪೈಕಿ ಪತ್ತೆಯಾಗದವರು/ ಗೈರು 13.77 ಲಕ್ಷ, ಶಾಶ್ವತವಾಗಿ ಸ್ಥಳಾಂತರಗೊಂಡವರು 60.42 ಲಕ್ಷ, ಮೃತ ಮತದಾರರು 15.79 ಲಕ್ಷ, ಈಗಾಗಲೇ ಬೇರೆ ಕಡೆ ನೋಂದಣಿ ಮಾಡಿಕೊಂಡವರು 6.33 ಲಕ್ಷ ಮತ್ತು ಇತರೆ 2.40 ಲಕ್ಷ ಮತದಾರರು ಇದ್ದಾರೆ.

ಈ ಪೈಕಿ 98.73 ಲಕ್ಷ ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿಯಲಿದ್ದಾರೆ. ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ಕೇಂದ್ರ ಚುನಾವಣಾ ಆಯೋಗವು ಕ್ಲೇಮು ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಿದೆ.

2002ರ ಮತದಾರರ ಪಟ್ಟಿ ಮತ್ತು ಎಸ್‌ಐಆರ್ ವೇಳೆ ನೀಡಿದ ಮಾಹಿತಿಗಳಲ್ಲಿ ವ್ಯತ್ಯಾಸಗಳಿದ್ದಲ್ಲಿ ಸಂಬಂಧಿಸಿದ ಬಿಎಲ್‌ಒ ಗಳೇ ಅಂತಹ ಮತದಾರರಿಗೆ ನೋಟಿಸ್ ನೀಡಲಿದ್ದು, ಈ ಸಂದರ್ಭದಲ್ಲಿ ನಿಗದಿತ ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು ಎಂದು ಹೇಳಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ