LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Education News

1008 ಶಾಲೆಗಳಲ್ಲಿ ಎಲ್.ಕೆ.ಜಿ-ಯು.ಕೆ.ಜಿ ತರಗತಿ ಪ್ರಾರಂಭ : ಮಧು ಬಂಗಾರಪ್ಪ

Advertisement
ಬಳ್ಳಾರಿ: ಈ ಬಾರಿ ಬಜೆಟ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ 41 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 1008 ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಪ್ರಾರಂಭಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಶಾಲೆಗಳ ಶಿಥಿಲ ಕೊಠಡಿಗಳ ದುರಸ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಸಾಕಷ್ಟು ಪ್ರಭಾವ ಬೀರುತ್ತಿವೆ.

ಈ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಲಭಿಸುತ್ತಿದ್ದು, ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿದೆ. ಮಕ್ಕಳ ಭವಿಷ್ಯಕ್ಕೆ ಎಲ್ಲಾ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಭಯಭೀತರಾಗಬಾರದು. ಈ ಹಿಂದೆ ಅವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಈಗ ಎಲ್ಲಾ ರೀತಿಯ ಅನುವು ಮಾಡಿಕೊಡಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ.

ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಹೇಳಿದ ಸಚಿವ ಮಧು ಬಂಗಾರಪ್ಪ ಅವರು, ಗಡಿಭಾಗದ ಶಾಲೆಗಳಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶಾತಿ ಪಡೆದು, ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು.

ಇದರಿಂದ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುವುದಿಲ್ಲ. ಇದಕ್ಕೆ ಬೇಕಾದ ಎಲ್ಲಾ ಸೌಲಭ್ಯ ರಾಜ್ಯ ಸರ್ಕಾರ ನೀಡಲಿದೆ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST