LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

20,000 ಶಿಕ್ಷಕರ ಹುದ್ದೆ ಖಾಲಿ ಇದ್ದಾವೆ, ಹೇಗೆ ಉತ್ತಮ ಫಲಿತಾಂಶ ನಿರೀಕ್ಷೆ ಮಾಡ್ತೀರಿ : ಹೊರಟ್ಟಿ

Advertisement

ಹಾವೇರಿ: ರಾಜ್ಯದಲ್ಲಿ 20,000 ಶಿಕ್ಷಕರ ಹುದ್ದೆ ಖಾಲಿ ಇದ್ದಾವೆ. ತರಗತಿಗೊಬ್ಬ ಶಿಕ್ಷಕರನ್ನು ಕೊಡುವ ಕೆಲಸ ಆಗಬೇಕಿತ್ತು.


ಹೀಗಿದ್ದರೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಹೇಗೆ ನಿರೀಕ್ಷೆ ಮಾಡ್ತೀರಿ ಎಂಬುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ.

ಇಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತರಗತಿಗೆ ಒಬ್ಬ ಶಿಕ್ಷಕರನ್ನು ಕೊಡುವ ಕೆಲಸ ಆಗಬೇಕು ಈ ವಿಚಾರವಾಗಿ ಶಿಕ್ಷಣ ಇಲಾಖೆಯ ಸಚಿವರಿಗೆ ಕೇಳುತ್ತೇನೆ. ಶಿಕ್ಷಕರ ನೇಮಕ ಮಾಡದಿದ್ದರೆ ಹೇಗೆ ಎಸ್ ಎಸ್ ಎಲ್ ಸಿ ರಿಸಲ್ಟ್ ಕೇಳುತ್ತೀರಿ? ಎಸ್‍ಎಸ್‍ಎಲ್‍ಸಿಯಲ್ಲಿ ಹೇಗೆ ಉತ್ತಮ ಫಲಿತಾಂಶ ನಿರೀಕ್ಷೆ ಮಾಡುತ್ತೀರಿ? ಶಿಕ್ಷಕರ ನೇಮಕಾತಿ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡುತ್ತೇನೆ. ಸರ್ಕಾರ ಎಲ್ಲಾ ನ್ಯೂನ್ಯತೆ ಸರಿಪಡಿಸಲಿ. ಎಮ್ಮಿಯನ್ನು ನೀರಿನಲ್ಲಿ ಮಲಗಿಸಿ ಬೆಲೆ ಕಟ್ಟುವುದು ಬೇಡ ಎಂದು ಅಸಮಾಧಾನ ಹೊರಹಾಕಿದರು.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST