LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಚೂಡಿದಾರ್ ಒಳಗಿತ್ತು 26.60 ಕೋಟಿ ರೂ. ಮೌಲ್ಯದ ಡ್ರಗ್ಸ್ : ಬೆಚ್ಚಿ ಬಿದ್ದ ಪೊಲೀಸರು

Advertisement

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru ) ಮಾದಕ ವಸ್ತು (illegal Substance ) ಜಾಲದ ವಿರುದ್ಧ ಸಮರ ಸಾರಿರುವ ಸಿಸಿಬಿ (Central Crime Branch) ಪೊಲೀಸರು ಮತ್ತೆ ಭರ್ಜರಿ ಬೇಟೆಯಾಡಿದ್ದಾರೆ.

ಮಹಿಳೆಯರ ಚೂಡಿದಾರ್ ವಸ್ತ್ರಗಳ ನಡುವೆ ಅಡಗಿಸಿ ತರಲಾಗುತ್ತಿದ್ದ ಬರೋಬ್ಬರಿ ₹26.60 ಕೋಟಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ಜಪ್ತಿ ಮಾಡಿದ್ದು, ಅಂತರರಾಜ್ಯ ಡ್ರಗ್ ಪೆಡ್ಲರ್‌ಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಿದ್ದಾರೆ.

ದೊಡ್ಡ ಮಟ್ಟದ ವಸ್ತ್ರ ವ್ಯಾಪಾರದ ನೆಪದಲ್ಲಿ ನವದೆಹಲಿಯಿಂದ ಬೆಂಗಳೂರಿಗೆ ಚೂಡಿದಾರ್ ಬಟ್ಟೆಗಳ ಪಾರ್ಸಲ್ ಸಾಗಿಸಲಾಗುತ್ತಿತ್ತು.

ಈ ಬಟ್ಟೆಗಳ ಮಡಿಕೆಗಳ ಮಧ್ಯೆ ರಹಸ್ಯವಾಗಿ ಎಂಡಿಎಂಎ ಕ್ರಿಸ್ಟಲ್ ಹಾಗೂ ಕೊಕೇನ್ ಪೌಡರ್ ಅನ್ನು ಅಡಗಿಸಿಟ್ಟು ಸಾಗಣೆ ಮಾಡಲಾಗುತ್ತಿತ್ತು. ಪೊಲೀಸರ ಕಣ್ಣಿಗೆ ಮಣ್ಣೆರಚಲು ಜಾಲ ರೂಪಿಸಿದ್ದ ಈ ವಿಭಿನ್ನ ತಂತ್ರ ಸಿಸಿಬಿ ಅಧಿಕಾರಿಗಳ ಸೂಕ್ಷ್ಮ ಕಾರ್ಯಾಚರಣೆಯಿಂದಾಗಿ ತಕ್ಷಣಕ್ಕೆ ಬಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿಲ್ ಕುಮಾರ್, ಸತ್ಯಂ, ಕಲೀಮ್ ಹಾಗೂ ಕನ್ನಯ್ಯ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 12.925 ಕೆಜಿ ತೂಕದ ಎಂಡಿಎಂಎ ಹಾಗೂ 60 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ.

 ದೆಹಲಿಯಲ್ಲಿದ್ದ ನೈಜೀರಿಯನ್ ಪ್ರಜೆಯಿಂದ ಈ ಡ್ರಗ್ಸ್ ಪಡೆದು, ಬೆಂಗಳೂರಿನ ಐಟಿ ನೌಕರರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ದುಬಾರಿ ಬೆಲೆಗೆ ಮಾರಾಟ ಮಾಡಲು ಸಂಚು ರೂಪಿಸಲಾಗಿತ್ತು.

ಈ ಹಿಂದೆ ಸಿಸಿಬಿ ಬಲೆಗೆ ಬಿದ್ದಿದ್ದ ಪ್ರಮುಖ ಆರೋಪಿಗಳು ನೀಡಿದ ಸುಳಿವು ಆಧರಿಸಿ ಮಾದಕ ದ್ರವ್ಯ ನಿಗ್ರಹ ದಳ ಈ ಯಶಸ್ವಿ ದಾಳಿ ನಡೆಸಿದೆ.

 ಸದ್ಯ ರಾಜಧಾನಿಯಲ್ಲಿ ಮಾದಕ ಜಾಲವನ್ನು ಬೇರುಸಹಿತ ಕಿತ್ತೊಗೆಯಲು ತನಿಖೆ ತೀವ್ರಗೊಳಿಸಲಾಗಿದ್ದು, ಈ ಅಂತರರಾಜ್ಯ ಕೃತ್ಯದ ಹಿಂದಿರುವ ಮೂಲ ಸರಬರಾಜುದಾರರಿಗಾಗಿ ಸಿಸಿಬಿ ಪೊಲೀಸರು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ