LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಇಂಡೋನೇಷ್ಯಾ ಮೂಲದ 5 ಒರಾಂಗುಟನ್‌ಗಳು ಒಡಿಶಾದಲ್ಲಿ ಪತ್ತೆ: ಅಂತಾರಾಷ್ಟ್ರೀಯ ಕಳ್ಳಸಾಗಣೆ ಶಂಕೆ 

Advertisement

ಇಂಡೋನೇಷ್ಯಾ ಹಾಗೂ ಮಲೇಷ್ಯಾದಂತಹ ದೇಶಗಳಲ್ಲಿ ಮಾತ್ರ ಕಂಡುಬರುವ ಅತಿ ಅಪರೂಪದ ಐದು ಒರಾಂಗುಟನ್‌ಗಳು ಒಡಿಶಾದ ಬಾಲಸೋರ್ ಜಿಲ್ಲೆಯ ಭೋಗರೈ ಬ್ಲಾಕ್‌ನ ರಾಂಕೋಥಾದ ಬಡಪಹಿ ಅರಣ್ಯ ಪ್ರದೇಶದಲ್ಲಿ ಅಚ್ಚರಿಯೆಂಬಂತೆ ಪತ್ತೆಯಾಗಿವೆ. ಮಾಹಿತಿ ತಿಳಿದ ತಕ್ಷಣ ಕಾರ್ಯಾಚರಣೆ ನಡೆಸಿದ ಉದಯಪುರ ಅರಣ್ಯ ಇಲಾಖೆ ಅಧಿಕಾರಿಗಳ ತಂಡವು ಈ ಐದೂ ಪ್ರಾಣಿಗಳನ್ನು ಸುರಕ್ಷಿತವಾಗಿ ರಕ್ಷಿಸಿದೆ.

ಪ್ರಸ್ತುತ ಈ ಒರಾಂಗುಟನ್‌ಗಳನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಸ್ಥಳಕ್ಕೆ ದೌಡಾಯಿಸಿರುವ ವೈದ್ಯಕೀಯ ತಂಡವೊಂದು ಅವುಗಳ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ನೀಡುತ್ತಿದೆ. ಪತ್ತೆಯಾಗಿರುವ ಒರಾಂಗುಟನ್‌ಗಳು ಕೇವಲ ಒಂದು ಅಥವಾ ಎರಡು ವರ್ಷ ವಯಸ್ಸಿನ ಮರಿಗಳಾಗಿವೆ.

ಮುಂದಿನ ದಿನಗಳಲ್ಲಿ ಇವುಗಳನ್ನು ಭುವನೇಶ್ವರದ ಪ್ರಸಿದ್ಧ ನಂದನ್‌ಕಾನನ್ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗುವುದು ಎಂದು ಅರಣ್ಯ ಸಚಿವ ಗಣೇಶ್ ರಾಮ್ ಸಿಂಗ್ ಖುಂಟಿಯಾ ತಿಳಿಸಿದ್ದಾರೆ. ಈ ಪ್ರಕ್ರಿಯೆಗಾಗಿ ನಂದನ್‌ಕಾನನ್‌ನಿಂದ ಪಶುವೈದ್ಯರು ಮತ್ತು ತಜ್ಞರ ವಿಶೇಷ ತಂಡವೊಂದನ್ನು ಕಳುಹಿಸಿಕೊಡಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್