LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿದ್ಯಾರ್ಥಿಗಳ ಪೋಷಕರಿಗೆ ಶಾಕ್ : ಪಠ್ಯ ಪುಸ್ತಕಗಳ ದರ ಶೇ. 50ರಷ್ಟು ಏರಿಕೆ

Advertisement

ಬೆಂಗಳೂರು: 2026- 27ನೇ ಶೈಕ್ಷಣಿಕ ಸಾಲಿನ ಶಾಲಾ ಪಠ್ಯಪುಸ್ತಕಗಳ ಬೆಲೆಯನ್ನು ಕರ್ನಾಟಕ ಪಠ್ಯಪುಸ್ತಕ ಸಂಘ ಹೆಚ್ಚಳ ಮಾಡಿದ್ದು, ಕೆಲವು ಪುಸ್ತಕಗಳ ಬೆಲೆಯಲ್ಲಿ ಶೇಕಡ 50ರವರೆಗೆ ಹೆಚ್ಚಳ ಆಗಿದೆ.


ರಾಜ್ಯ ಪಠ್ಯಕ್ರಮ ಅನುಸರಿಸುವ ಖಾಸಗಿ ಶಾಲೆಗಳಿಗೆ ಅಗತ್ಯವಿರುವ ಪಠ್ಯಪುಸ್ತಕಗಳಿಗೆ ಬೇಡಿಕೆ ಸಲ್ಲಿಸಲು ಶಾಲಾ ಶಿಕ್ಷಣ ಇಲಾಖೆ ಇತ್ತೀಚಿಗೆ ಸೂಚನೆ ನೀಡಿತ್ತು.ಸೂಚನಾ ಪತ್ರದಲ್ಲಿ ನಮೂದಿಸಿದ ಪ್ರಕಾರ ಕೆಲವು ಪುಸ್ತಕಗಳ ಬೆಲೆ ಹೆಚ್ಚಳ ಮಾಡಲಾಗಿದೆ.

ಮೂರನೇ ತರಗತಿ ಪರಿಸರ ಅಧ್ಯಯನ ಪುಸ್ತಕದ ದರ 22 ರಿಂದ 45 ರೂ.ಗೆ ಹೆಚ್ಚಳವಾಗಿದೆ. ಎರಡನೇ ತರಗತಿಯ ಗಣಿತ(ಇಂಗ್ಲಿಷ್ ಭಾಗ-2) ಪಠ್ಯ ಪುಸ್ತಕ ದರ 25 ರಿಂದ 51 ರೂ.ಗೆ ಹೆಚ್ಚಳವಾಗಿದೆ.

ಒಂದರಿಂದ ಐದನೇ ತರಗತಿ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ ವಿಷಯಗಳ ಪಠ್ಯಪುಸ್ತಕಗಳ ದರವನ್ನು ಎಲ್ಲಾ ಹಂತಗಳಲ್ಲೂ ಹೆಚ್ಚಳ ಮಾಡಲಾಗಿದೆ. ನಾಲ್ಕನೇ ತರಗತಿಯ ಪುಸ್ತಕದ ದರ 31 ರಿಂದ 51 ರೂ.ಗೆ, ಒಂದನೇ ತರಗತಿಯ ಮೃದಂಗ ಪುಸ್ತಕ ದರ 42 ರಿಂದ 60 ರೂ.ಗೆ ಏರಿಕೆಯಾಗಿದೆ.

ಪಠ್ಯಪುಸ್ತಕಗಳ ದರ ಹೆಚ್ಚಳಕ್ಕೆ ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಮೊದಲೇ ಹೊಸ ದರದ ಪಟ್ಟಿಯನ್ನು ಸರ್ಕಾರ ಪ್ರಕಟಿಸಬೇಕಿತ್ತು. ಈಗ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡುವ ಪರಿಸ್ಥಿತಿಯಲ್ಲಿ ಶಾಲೆಗಳು ಇಲ್ಲ, ಬೆಲೆ ಏರಿಕೆ ತಡೆಯಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ