LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

56 ಇಂಚಿನ ಎದೆಯಲ್ಲಿ ಮನುಷ್ಯತ್ವ ಇರಬೇಕು, ಕರುಣೆ ಇರಬೇಕು : ಸಿದ್ದರಾಮಯ್ಯ

Advertisement
ದಾವಣಗೆರೆ : ಮೋದಿ ಅವರು ಅಧಿಕಾರಕ್ಕೆ ಬಂದು 11 ವರ್ಷ ಆಯಿತು. 56 ಇಂಚಿನ ಎದೆ ಇದೆ ಎನ್ನುತ್ತಾರೆ. ಎದೆಯಲ್ಲಿ ಮನುಷ್ಯತ್ವ ಇರಬೇಕು, ಕರುಣೆ ಇರಬೇಕು. 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಎನ್ನುವ ಇವರು ಬೆಲೆ ಏರಿಕೆ ವಿರುದ್ಧ ಏಕೆ ಮಾತನಾಡಲ್ಲ?. ಮೋದಿ ಪಿಎಂ ಆಗುವ ವೇಳೆ 28 ಸಾವಿರ ಚಿನ್ನದ ಬೆಲೆ ಇತ್ತು.‌ ಇದೀಗ 1 ಲಕ್ಷ ಬೆಲೆ ಇದೆ. ಇದಕ್ಕೆ ನರೇಂದ್ರ ಮೋದಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸೋಮವಾರ ನಡೆದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಒಂದು ಕೆಜಿ ಬೆಳ್ಳಿಯ ಬೆಲೆ 43 ಸಾವಿರ ಇತ್ತು, ಇದೀಗ 95 ಸಾವಿರ ಆಗಿದೆ. ಅಲ್ಲದೆ ಪೆಟ್ರೋಲ್, ಡಿಸಿಲ್, ಗ್ಯಾಸ್ ಬೆಲೆ ಗಗನಕ್ಕೆ ಏರಿಕೆ ಆಗಿದೆ.

400 ರೂಪಾಯಿ ಇದ್ದ ಗ್ಯಾಸ್ 890 ರೂಪಾಯಿ ಆಗಿದೆ. ಗ್ಯಾಸ್ ಸಬ್ಸಿಡಿ ಕೊಡ್ತಿದ್ದರು ಅದನ್ನೂ ನಿಲ್ಲಿಸಿದ್ದಾರೆ. ಇದರಿಂದ ಜನ ಸೌದೆ ಒಲೆಯತ್ತ ವಾಪಸ್ ಆಗಿದ್ದಾರೆ. ದೆಹಲಿ, ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶದ ಚುನಾವಣೆಯಲ್ಲಿ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ರು ಎಂದು ಸಿಎಂ ಕಿಡಿಕಾರಿದರು.

ಬಿಜೆಪಿ-ಜೆಡಿಎಸ್ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಇಬ್ಬರೂ ಒಂದಾದರೂ ನಮ್ಮನ್ನು ಏನೂ ಮಾಡಲಾರರು. ಕಾಂಗ್ರೆಸ್ ಸರ್ಕಾರ ಏನೂ ಕೆಲಸ ಮಾಡ್ತಿಲ್ಲ, ಅವರ ಬಳಿ ಹಣ ಇಲ್ಲವೆಂದು ಪ್ರತಿಪಕ್ಷದವರು ವಿನಾಕಾರಣ ಟೀಕೆ ಮಾಡ್ತಾರೆ. ದಾವಣಗೆರೆಯಲ್ಲಿ 1,356 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ ಚಾಲನೆ‌ ನೀಡಿದ್ದು ಇವರ ಕಣ್ಣಿಗೆ ಕಾಣುವುದಿಲ್ವಾ? ಎಂದು ವಾಗ್ದಾಳಿ ನಡೆಸಿ ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ