LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಸ್ತೆ ಕಾಮಗಾರಿ ವೇಳೆ ವಿಜಯನಗರ ಕಾಲದ 6 ಐತಿಹಾಸಿಕ ವೀರಗಲ್ಲು ಪತ್ತೆ 

Advertisement

ದೊಡ್ಡಬಳ್ಳಾಪುರ: ರಸ್ತೆ ಕಾಮಗಾರಿಯ ವೇಳೆ ದೊರೆತ 6 ಐತಿಹಾಸಿಕ ವೀರಗಲ್ಲುಗಳನ್ನು ಪುರಾತತ್ವ ಇಲಾಖೆ ಸಹಯೋಗದಲ್ಲಿ ಸಂರಕ್ಷಿಸಿರುವ ಘಟನೆ ತಾಲೂಕಿನ ಲಿಂಗನಹಳ್ಳಿಯಲ್ಲಿ ನಡೆದಿದೆ.

ತಾಲೂಕಿನ ಲಿಂಗದಹಳ್ಳಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಈ ವೀರಗಲ್ಲುಗಳು ಪತ್ತೆಯಾಗಿವೆ.

ಕಾಮಗಾರಿಯ ವೇಳೆ ಕಾರ್ಮಿಕರು ಅವುಗಳನ್ನು ಮಣ್ಣಿನಡಿ ಮುಚ್ಚಲು ಮುಂದಾಗಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪುರಾತತ್ವ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಪುರಾತತ್ವ ಇಲಾಖೆಯ ಉಪ ನಿರ್ದೇಶಕಿ ಕಾವ್ಯಶ್ರೀ ಕಾಮಗಾರಿ ಸ್ಥಗಿತಗೊಳಿಸಿ, ಮಣ್ಣಿನಡಿ ಹುದುಗಿದ್ದ ಕಲ್ಲುಗಳನ್ನು ಹೊರತೆಗೆಸುವ ಮೂಲಕ ಅವುಗಳ ಸಂರಕ್ಷಣೆಗೆ ಕ್ರಮ ಕೈಗೊಂಡಿದ್ದಾರೆ.

ಮೂರು ಯುದ್ಧ ವೀರಗಲ್ಲು, ಮೂರು ಮಾಸ್ತಿ ಕಲ್ಲು:

ಲಿಂಗನಹಳ್ಳಿಯಲ್ಲಿ ಪತ್ತೆಯಾಗಿರುವ ಆರು ಕಲ್ಲುಗಳಲ್ಲಿ ಮೂರು ಯುದ್ಧ ವೀರಗಲ್ಲುಗಳು ಹಾಗೂ ಮೂರು ವೀರ ಮಾಸ್ತಿಕಲ್ಲುಗಳಿವೆ.

ಇವುಗಳ ಕೆತ್ತನೆ ಮತ್ತು ಕಲಾತ್ಮಕ ವಿನ್ಯಾಸಗಳು ವಿಜಯನಗರ ಅರಸರ ಕಾಲದ ಇತಿಹಾಸದ ಮೇಲೆ ಬೆಳಕು ಚೆಲ್ಲುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವೀರಗಲ್ಲಿನಲ್ಲಿ ವೀರನು ಬಿಲ್ಲು ಮತ್ತು ಕತ್ತಿಯನ್ನು ಹಿಡಿದಿರುವ ಚಿತ್ರಣವಿದೆ. ಆತನ ಬಲಭಾಗದಲ್ಲಿ ಸರ್ವಾಲಂಕಾರಭೂಷಿತಳಾದ ಪತ್ನಿ ನಿಂತಿರುವ ದೃಶ್ಯವನ್ನು ಕೆತ್ತಲಾಗಿದೆ.

 ಇತರ ಕಲ್ಲುಗಳಲ್ಲಿಯೂ ಆಕರ್ಷಕ ಕೆತ್ತನೆಗಳಿದ್ದು, ಅಂದಿನ ಕಾಲದ ಶಿಲ್ಪಕಲೆ, ಸಾಮಾಜಿಕ ಜೀವನ ಹಾಗೂ ಐತಿಹಾಸಿಕ ಹಿನ್ನೆಲೆಯನ್ನು ಅಧ್ಯಯನ ಮಾಡಲು ಇವು ಸಹಕಾರಿಯಾಗಲಿವೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ