LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Business News

19 ಕೆಜಿ ಸಿಲಿಂಡರ್ ಬೆಲೆ 10.50 ರೂ. ಹೆಚ್ಚಳ 

Advertisement

ನವದೆಹಲಿ: ಒಂದೆಡೆ ರಾಜ್ಯದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದರೆ, ಮತ್ತೊಂದೆಡೆ ಹಬ್ಬದ ಸೀಸನ್ ಹಾಗೂ ದೀಪಾವಳಿಗೆ ದಿನಗಣನೆ ಆರಂಭವಾಗಿರುವಾಗಲೇ ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. 

ದೇಶದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ದರವನ್ನು ಹೆಚ್ಚಿಸಿ ಆದೇಶ ಹೊರಡಿಸಿವೆ.

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿರುವುದರಿಂದ ಹೋಟೆಲ್, ರೆಸ್ಟೋರೆಂಟ್‌ಗಳು, ಕ್ಯಾಂಟೀನ್ ಹಾಗೂ ಇತರೆ ಸಣ್ಣ-ಪರಿಣಾಮಕಾರಿ ವ್ಯಾಪಾರ ನಡೆಸುವ ವಾಣಿಜ್ಯೋದ್ಯಮಿಗಳಿಗೆ ನಷ್ಟದ ಬಿಸಿ ತಟ್ಟಲಿದೆ. ದೆಹಲಿಯಿಂದ ಹಿಡಿದು ಬಿಹಾರದ ಪಾಟ್ನಾವರೆಗೆ ಪ್ರಮುಖ ನಗರಗಳಲ್ಲಿ ಈ ಬೆಲೆ ಏರಿಕೆ ಅನ್ವಯವಾಗಿದ್ದು, ಹಬ್ಬದ ಸಮಯದಲ್ಲಿ ಹೊರಗಿನ ತಿಂಡಿ-ತಿನಿಸುಗಳು ಹಾಗೂ ಆಹಾರ ಪದಾರ್ಥಗಳ ಬೆಲೆ ಕೂಡ ಏರಿಕೆಯಾಗುವ ಸಾಧ್ಯತೆಯಿದೆ.

ರಾಜಧಾನಿ ದೆಹಲಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯು ಈ ಹಿಂದೆ ಇದ್ದ 2,810 ರೂಪಾಯಿಯಿಂದ ಈಗ 2,820 ರೂಪಾಯಿಗೆ ತಲುಪಿದೆ.

 ಇನ್ನುಳಿದಂತೆ ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,994.50 ರೂ., ಮುಂಬೈನಲ್ಲಿ 2,764 ರೂ. ಹಾಗೂ ಅಹಮದಾಬಾದ್‌ನಲ್ಲಿ 10.50 ರೂ. ಹೆಚ್ಚಾಗಿ 2,842 ರೂ.ಗೆ ಏರಿಕೆಯಾಗಿದೆ.

 ಲಕ್ನೋದಲ್ಲಿ 2,942 ರೂ., ಮೇಘಾಲಯದ ಶಿಲ್ಲಾಂಗ್‌ನಲ್ಲಿ 3,091 ರೂ. ಮತ್ತು ಬಿಹಾರದ ಪಾಟ್ನಾದಲ್ಲಿ ಗರಿಷ್ಠ ಮಟ್ಟದ 3,132 ರೂಪಾಯಿಗೆ ತಲುಪಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ