LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮದರ್ಸ್ ಡೇ ದಿನವೆ ಹೆತ್ತಮ್ಮನನ್ನು ಗುಂಡಿಕ್ಕಿ ಕೊಂದ ಮಗ.

Advertisement

ಉತ್ತರ ಪ್ರದೇಶ : ಆಸ್ತಿ ವಿಚಾರವಾಗಿ ನಡೆದ ಜಗಳದಲ್ಲಿ ಮಗನೇ ತನ್ನ ತಾಯಿ ಮತ್ತು ತಮ್ಮನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಯನ್ನು ರಾಜ್‌ಕಿಶೋರ್ ಗುಪ್ತಾ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಮನೆಯೊಳಗೆ ಗುಂಡಿನ ಸದ್ದು ಕೇಳಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಘಟನೆ ಬಹಿರಂಗವಾಗಿದೆ.

ಕುಟುಂಬದ ಪಿತ್ರಾರ್ಜಿತ ಆಸ್ತಿಯನ್ನು ಆರೋಪಿಯ ತಂದೆ ಮಾರಾಟ ಮಾಡಿದ್ದರು. ಆದರೆ ಈ ವಿಚಾರಕ್ಕೆ ರಾಜ್‌ಕಿಶೋರ್ ವಿರೋಧ ವ್ಯಕ್ತಪಡಿಸಿದ್ದ. ಇದೇ ವಿಷಯವಾಗಿ ಮನೆಯಲ್ಲಿ ತಾಯಿ ಮತ್ತು ತಮ್ಮನೊಂದಿಗೆ ಜಗಳ ನಡೆದಿದೆ.

ಜಗಳ ತೀವ್ರವಾಗುತ್ತಿದ್ದಂತೆ ಆರೋಪಿ ಬಂದೂಕು ತೆಗೆದು ತಾಯಿ ಮತ್ತು ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿಯನ್ನು ಬಂಧಿಸಲು ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿ : ರಾಜು ಮುಂಡೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST