LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಲೈವ್‌ನಲ್ಲಿ ಮಾತನಾಡುತ್ತಾ ಆತ್ಮಹತ್ಯೆಗೆ ಶರಣಾದ ಮಹಿಳೆ

Advertisement
ಬಳ್ಳಾರಿ: ಮಹಿಳೆ ಲೈವ್‌ನಲ್ಲಿ ಮಾತನಾಡುವ ಸಮಯದಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಣಿನಾಡು ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ ಹುಸೇನ್ ನಗರದ ನಿವಾಸಿ ಆಗಿರುವ 23 ವರ್ಷ ವಯಸ್ಸಿನ ಮುನ್ನಿ ಎಂಬುವವರು ಇದೀಗ ಲೈವ್‌ನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ 6 ತಿಂಗಳಿಂದ ಗಂಡನಿಂದ ಮುನ್ನಿ ದೂರವಾಗಿದ್ದರು. ಮೊಹಮ್ಮದ್ ಶೇಖ್ ಎಂಬಾತನ ಜೊತೆ ಮುನ್ನಿ ಸ್ನೇಹ ಬೆಳೆಸಿದ್ದರು.

ಮದುವೆಯಾಗಿ ಇಬ್ಬರು ಮಕ್ಕಳನ್ನ ಪಡೆದಿದ್ದರೂ ಮುನ್ನಿ ಮತ್ತೊಬ್ಬರ ಜೊತೆಗೆ ಆತ್ಮೀಯತೆ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಹೀಗಿದ್ದಾಗ ದಿಢೀರ್ ವೀಡಿಯೋ ಕಾಲ್‌ನಲ್ಲಿ ಮಾತನಾಡುವ ವೇಳೆ ಮುನ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೊಹಮ್ಮದ್ ಶೇಖ್ ಹಾಗೂ ಮುನ್ನಿ ನಡುವೆ ಕೆಲ ದಿನಗಳ ಹಿಂದಷ್ಟೇ ದೊಡ್ಡ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ಮುನ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ