LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಮಹಿಳೆ ದಾರುಣ ಸಾವು

Advertisement
ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ಗುರುವಾರ ಭಯಾನಕ ದುರಂತ ನಡೆದಿದೆ.

ಕಬ್ಬು ಕಟಾವು ಮಾಡುತ್ತಿದ್ದ ಬೃಹತ್ ಹಾರ್ವೆಸ್ಟರ್ ಯಂತ್ರಕ್ಕೆ ಸಿಲುಕಿ ಸ್ಥಳದಲ್ಲೇ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ. 54 ವರ್ಷದ ಶೋಭಾ ಶ್ರೀಕಾಂತ ಸಂಕ್ರಟ್ಟಿ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮದೇ ಜಮೀನಿನಲ್ಲಿ ಯಂತ್ರದಿಂದ ಕಬ್ಬು ಕಟಾವು ನಡೆಯುತ್ತಿತ್ತು. ಶೋಭಾ ಯಂತ್ರದ ಹಿಂದೆ ಬೀಳುತ್ತಿದ್ದ ಕಬ್ಬುಗಳನ್ನು ಆರಿಸಿ ಸರಿದೂಗಿಸುವ ಕೆಲಸ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಯಂತ್ರದ ತಿರುಗುವ ಬ್ಲೇಡ್‌ಗೆ ಸಿಲುಕಿಕೊಂಡಿದ್ದಾರೆ. ಕ್ಷಣಾರ್ಧದಲ್ಲಿ ಭಯಾನಕ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಘಟನೆ ನಡೆದ ತಕ್ಷಣ ಸ್ಥಳೀಯರು ಯಂತ್ರದ ಆಪರೇಟರ್ ಅನ್ನು ನಿಲ್ಲಿಸಲೂ ಪ್ರಯತ್ನಿಸಿದರೂ ಈಗಾಗಲೇ ಶೋಭಾ ರಕ್ತದ ಮಡುವಿನಲ್ಲಿ ಸಾವನ್ನಪ್ಪಿದ್ದರು.

ತಕ್ಷಣ ಅಥಣಿ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶಿವಾನಂದ ಭೋಜೆ ನೇತೃತ್ವದಲ್ಲಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಅಥಣಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ