LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹೃದಯಾಘಾತಕ್ಕೆ ಯುವ ವಕೀಲ ಬಲಿ

Advertisement

ಗಂಗಾವತಿ : ಇಲ್ಲಿಯ ಯುವ ವಕೀಲ ಕನಕೇಶ್ ಮುರುಡಿ (25) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ನ್ಯಾಯಾಲಯದ ವಕೀಲರ ಸಂಘದ ಸಭಾಂಗಣದಲ್ಲಿ ಜರುಗಿದ ನ್ಯಾಯಾಧೀಶರ ಬಿಳ್ಕೋಡುಗೆ ಸಮಾರಂಭದಲ್ಲಿ ಭಾಗಿಯಾದ ನಂತರ ಏರ್ಪಡಿಸಿದ್ದ ಭೋಜನಕೂಟದ ನಂತರ ಈ ಘಟನೆ ನಡೆದಿದೆ.

ಮೂಲತ ಕನಕಗಿರಿ ತಾಲೂಕಿನ ಚಿಕ್ಕ ಮಾದಿನಾಳ ಗ್ರಾಮದ ಕನಕೇಶ ಮುರುಡಿ ಅವರು ಕಳೆದ ಒಂದು ವರ್ಷದ ಹಿಂದೆ ಕಾನೂನು ಪದವಿ ಮುಗಿಸಿ ಪ್ರಾಕ್ಟಿಸ್ ಮಾಡುತ್ತಿದ್ದರು.

ನ್ಯಾಯಾಲಯದ ಆವರಣದಲ್ಲಿದ್ದ ಕ್ಯಾಂಟಿನ್ ಬಳಿ ನೀರು ಕುಡಿದ ಕನಕೇಶ ಮುರುಡಿ ಅವರಿಗೆ ವಾಂತಿ ಪ್ರಾರಂಭವಾಗಿದೆ. ನಂತರ ಕುಸಿದು ಬಿದ್ದಿದ್ದಾರೆ.

ಸುದ್ದಿ ತಿಳಿಯುತ್ತಲೆ ಕಾರ್ಯಕ್ರಮದಲ್ಲಿದ್ದ ನ್ಯಾಯಾಧೀಶರು, ನ್ಯಾಯವಾದಿಗಳು ಆಗಮಿಸಿ ಕೂಡಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರೊಳಗೆ ಕನಕೇಶ ಮೃತಪಟ್ಟಿದ್ದಾರೆ. ಕನಕೇಶ್‌ಗೆ ತಾಯಿ, ಸೇರಿದಂತೆ ಅಪಾರ ಬಳಗ ಇದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ