Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕಸ್ಮಿಕ ಅಗ್ನಿ ಅವಘಡ : ಇಬ್ಬರು ಮಕ್ಕಳು ಸುಟ್ಟು ಭಸ್ಮ 

Advertisement

ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ಎಳೆಹಸುಳೆಗಳು ಬೆಂಕಿಗೆ ಆಹುತಿಯಾಗಿರುವ ಮನಕಲಕುವ ಘಟನೆ ನಡೆದಿದೆ.

ಕೂಲಿ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್ ಹಾಕಿಕೊಂಡು ವಾಸವಿತ್ತು.

ಐದು ವರ್ಷದ ಅರ್ಜುನ ಹಾಗೂ ಮೂರು ವರ್ಷದ ಆಶಾ ಮೃತಪಟ್ಟ ದುರ್ದೈವಿಗಳು. ಇಂದು ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ, ಅಜ್ಜಿ ಮಕ್ಕಳನ್ನು ಶೆಡ್‌ನಲ್ಲಿ ಬಿಟ್ಟು ಸ್ವಲ್ಪ ದೂರ ಹೊರಗಡೆ ಹೋಗಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಶೆಡ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಸಜೀವ ದಹನ: ಕ್ಷಣಾರ್ಧದಲ್ಲಿ ಬೆಂಕಿ ಇಡೀ ಶೆಡ್ ಅನ್ನು ಆವರಿಸಿಕೊಂಡಿದ್ದರಿಂದ ಒಳಗೆ ಮಲಗಿದ್ದ ಮಕ್ಕಳಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಓಡಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಷ್ಟರಲ್ಲೇ ಎಲ್ಲವೂ ಸುಟ್ಟು ಭಸ್ಮವಾಗಿತ್ತು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು