LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಕುಟುಂಬ ಐವರ ಮೇಲೆ ಆಸಿಡ್ ದಾಳಿ

Advertisement

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ 6 ತಿಂಗಳ ಮಗು ಸೇರಿ ಕುಟುಂಬ ಐವರ ಮೇಲೆ ಆಸಿಡ್ ದಾಳಿ ನಡೆಸಿ ಅತ್ಟಹಾಸ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ತಾರಿಹಾಳ ವಾಜಪೇಯಿ ನಗರದಲ್ಲಿ ಈ ಘಟನೆ ನಡೆದಿದೆ. ನಾದಿನಿಯರ ಫೋಟೋ ಕ್ಲಿಕ್ಕಿಸಿದ ವಿಚಾರವಾಗಿ ಪತಿ-ಪತ್ನಿ ನಡುವೆ ಗಲಾಟೆ ಆರಂಭವಾಗಿದ್ದು, ಈ ವೇಳೆ ಕೋಪದ ಬರದಲ್ಲಿ ಪತಿ ಮಹಾಶಯ ಸ್ಥಳದಲ್ಲಿದ್ದ ಎಲ್ಲರ ಮೇಲೆ ಎಸಿಡ್ ಎರಚಿದ್ದಾನೆ.ಘಟನೆಯಲ್ಲಿ 6 ತಿಂಗಳ ಮಗು, ಪತ್ನಿ, ನಾದಿನಿಯರು ಸೇರಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುರೇಶ್ ಬೈಲ್ ಪತ್ತಾರ (33)ಎಂಬಾತ ಆಸಿಡ್ ಎರಚಿರುವ ಆರೋಪಿ. ರಾಜೇಶ್ವರಿ (24) ಅವರ ಸ್ಥಿತಿ ತೀವ್ರ ಗಂಭೀರವಾಗಿದೆ. 

6 ತಿಂಗಳ ಮಗುವಿನ ಮುಖ, ಬಾಯಿಗೂ ಆಸಿಡ್ ತಗುಲಿ ಗಾಯಗಳಾಗಿವೆ. ಶೃತಿ ಹಾಗೂ ರೇಷ್ಮಾ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆಸಿಡ್ ಎರಚುವಾಗ ಸುರೇಶ್ ಗೂ ಆಸಿಡ್ ತಗುಲಿ ಗಾಯಗಲಾಗಿವೆ.

ನಾದಿನಿಯರ ಫೋಟೋ ವಿಚಾರವಾಗಿ ಸುರೇಶ್ ಹಾಗೂ ಪತ್ನು ರಾಜೇಶ್ವರಿ ನಡುವೆ ಜಗಳವಾಗಿತ್ತು. ರಾಜೇಶ್ವರಿ ಪತಿಗೆ ನಾದಿನಿಯರ ಫೋಟೋ ತೆಗೆಯದಮ್ತೆ ತಾಕೀತು ಮಾಡಿದ್ದಳು.

ಆದರೂ ಕೇಳದ ಪತಿ ಸುರೇಶ್ ನಾದಿನಿಯರ ಫೋಟೋ ಕ್ಲಿಕ್ಕಿಸಿ ಕಿರಿಕ್ ಮಾಡಿದ್ದ. ಇದೇ ವಿಚಾರವಾಗಿ ಪತಿ-ಪತ್ನಿ ಜಗಳ ವಿಕೋಪಕ್ಕೆ ತಿರುಗಿದೆ.

ತಾಮ್ರ, ಹಿತ್ತಾಳೆ ತೊಳೆಯಲು ಬಳಸುತ್ತಿದ್ದ ಕೆಮಿಕಲ್ ನಿಂದ ಸುರೇಶ್ ಐವರ ಮೇಲೆ ದಾಳಿ ನಡೆಸಿದ್ದಾನೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ