LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಟ ದುನಿಯಾ ವಿಜಯ್‌-ನಾಗರತ್ನ ದಾಂಪತ್ಯ ಅಂತ್ಯ :  2 ಕೋಟಿ ಜೀವನಾಂಶ ನೀಡಲು ಆದೇಶ

Advertisement

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ ಹಾಗೂ ಅವರ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನುಬದ್ಧವಾಗಿ ಅಂತ್ಯವಾಗಿದೆ.

 ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿರುವ ಹೈಕೋರ್ಟ್‌ ವಿಭಾಗೀಯ ಪೀಠ, ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ನೀಡುವಂತೆ ಆದೇಶಿಸಿದೆ.

ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ ಹಾಗೂ ಅವರ ಪತ್ನಿ ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನಕ್ಕೆ ಕೊನೆಗೂ ಅಧಿಕೃತ ತೆರೆ ಬಿದ್ದಿದೆ.

ಇಬ್ಬರ ವಿಚ್ಛೇದನ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠವು ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ.

ವಿಚ್ಛೇದನ ಮಂಜೂರು ಮಾಡುವುದರ ಜೊತೆಗೆ, ನಾಗರತ್ನ ಅವರಿಗೆ ₹2 ಕೋಟಿ ಜೀವನಾಂಶ ಪಾವತಿಸುವಂತೆ ದುನಿಯಾ ವಿಜಯ್‌ ಅವರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಇಬ್ಬರ ಹಣಕಾಸಿನ ಸ್ಥಿತಿ, ದುನಿಯಾ ವಿಜಯ್‌ ಅವರ ಸಾಮಾಜಿಕ ಹಾಗೂ ವೃತ್ತಿಪರ ಸ್ಥಾನಮಾನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಜೀವನಾಂಶದ ಮೊತ್ತವನ್ನು ನ್ಯಾಯಪೀಠ ನಿಗದಿಪಡಿಸಿದೆ ಎಂದು ವರದಿಯಾಗಿದೆ. ಅಲ್ಲದೆ, ದಂಪತಿಗೆ ಇರುವ ಮೂವರು ಮಕ್ಕಳ ಜವಾಬ್ದಾರಿಯನ್ನೂ ಗಮನದಲ್ಲಿಟ್ಟುಕೊಂಡು ಕೋರ್ಟ್‌ ಈ ಆದೇಶ ನೀಡಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್