LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ನೇಮಕ

Advertisement

ಚೆನ್ನೈ: ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯನ್ನಾಗಿ ಬುಧವಾರ ನೇಮಕ ಮಾಡಲಾಗಿದೆ.


ಮಾಜಿ ಸಂಸದರಾದ ವಿ.ಪಿ ದೊರೈಸಾಮಿ, ಕೆ.ಪಿ.ರಾಮಲಿಂಗಂ, ಶಶಿಕಲಾ ಪುಷ್ಪಾ ಮತ್ತು ಎಂ. ಚಕ್ರವರ್ತಿ ಸೇರಿದಂತೆ ಇತರರು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ.

ಅವರ ನೇಮಕಾತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅನುಮೋದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನಟಿ ಖುಷ್ಬೂ ಸುಂದರ್, ನನಗೆ ನಿಜಕ್ಕೂ ತುಂಬಾ ಸಂತೋಷವಾಗಿದೆ.

ನನ್ನ ಮೇಲೆ ನಂಬಿಕೆ ಇರಿಸಿ, ಈ ಹುದ್ದೆ ನೀಡಿದ್ದಕ್ಕಾಗಿ ನೈನಾರ್ ನಾಗೇಂದ್ರನ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST