LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಟಿ ರನ್ಯಾ ರಾವ್ ಗೋಲ್ಡ್ ಗೋಲ್ಡ್  ಸ್ಮಗ್ಲಿಂಗ್ ಕೇಸ್ : 34.12 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Advertisement

ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.


ಬೆಂಗಳೂರಿನ ಅರ್ಕಾವತಿ ಬಡಾವಣೆಯ ಫ್ಲ್ಯಾಟ್, ಆನೇಕಲ್ ನ ಕೃಷಿ ಭೂಮಿ, ತುಮಕೂರಿನ ಕೈಗಾರಿಕಾ ಪ್ರದೇಶದ ಜಮೀನುಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿದ್ದು, ಮೇ ತಿಂಗಳಲ್ಲಿ ರನ್ಯಾ ರಾವ್ ಅವರಿಗೆ ಸಂಬಂಧಿಸಿದ 16 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು.

ಇಡಿ ಅಧಿಕಾರಿಗಳ ತನಿಖೆಯ ಸಂದರ್ಭದಲ್ಲಿ ಸಾಕಷ್ಟು ಅಂಶಗಳು ಬೆಳಕಿಗೆ ಬಂದಿದ್ದವು. ಇದೀಗ 34.12 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎನ್ನಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST