LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

3 ದಿನ ಮೊದಲೇ ವಿಧಾನಸಭೆ, ವಿಧಾನಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Advertisement

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನವು ನಿಗದಿತ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟುಹಿಡಿದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಮುಕ್ತಾಯಗೊಳಿಸಲಾಯಿತು.

ವಾಸ್ತವವಾಗಿ ಈ ಅಧಿವೇಶನವು ಆಗಸ್ಟ್ 27ರವರೆಗೆ ನಡೆಯಲು ದಿನಾಂಕ ನಿಗದಿಯಾಗಿತ್ತು. ಆದರೆ, ಸಚಿವ ನಾಗೇಂದ್ರ ಅವರ ವಜಾಕ್ಕೆ ಆಗ್ರಹಿಸಿ ವಿಪಕ್ಷಗಳು ಕಲಾಪಕ್ಕೆ ನಿರಂತರ ಅಡ್ಡಿಪಡಿಸಿದ್ದಲ್ಲದೆ, ಪರಿಷತ್ ಹಾಗೂ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಗೆ ಕರೆ ನೀಡಿದ್ದವು.

ವಿಪಕ್ಷಗಳ ಈ ನಿರಂತರ ಗದ್ದಲ ಮತ್ತು ಧರಣಿಯ ನಡುವೆಯೇ ಸರ್ಕಾರವು ಕಲಾಪವನ್ನು 3 ದಿನಗಳ ಮುಂಚಿತವಾಗಿಯೇ ಅನಿರ್ದಿಷ್ಟಾವಧಿಗೆ ಮುಂದೂಡುವ ನಿರ್ಧಾರ ಕೈಗೊಂಡಿತು.

ಕಾಂಗ್ರೆಸ್ ಓಡಿಹೋಗಿದೆ ಎಂದ ಬಿಜೆಪಿ

ಅಧಿವೇಶನವನ್ನು ಅವಧಿಗೆ ಮುನ್ನವೇ ಮುಕ್ತಾಯಗೊಳಿಸಿದ ಸರ್ಕಾರದ ನಡೆಯ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಸಚಿವರ ಭ್ರಷ್ಟಾಚಾರ ಮತ್ತು ಸರ್ಕಾರದ ವೈಫಲ್ಯಗಳನ್ನು ಸದನದಲ್ಲಿ ಚರ್ಚಿಸಲು ಧೈರ್ಯವಿಲ್ಲದೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕಲಾಪದಿಂದ ಪಲಾಯನ ಮಾಡಿದೆ, ಜವಾಬ್ದಾರಿಯಿಂದ ಓಡಿಹೋಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್