LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ರಮ್ಯಾ, ವಿಜಯಲಕ್ಷ್ಮೀ ಬಳಿಕ, ನಟಿ ಐಶ್ವರ್ಯಾ ಸಿಂಧೋಗಿಗೆ ಅಶ್ಲೀಲ ಕಮೆಂಟ್ : ದೂರು ದಾಖಲು 

Advertisement

ಬೆಂಗಳೂರು: ಪೊಲೀಸ್ ಇಲಾಖೆ, ಮಹಿಳಾ ಆಯೋಗ ಎಷ್ಟೇ ಎಚ್ಚರಿಕೆ ನೀಡಿದರೂ ಚಂದನವನದ ನಟಿಯರಿಗೆ ಕಿಡಿಗೇಡಿಗಳು ಅಶ್ಲೀಲವಾಗಿ, ಅವಹೇಳನಕಾರಿಯಾಗಿ ಕಮೆಂಟ್ ಮಾಡುವ ಕೃತ್ಯ ನಿಲ್ಲಿಸಿಲ್ಲ. ನಟಿ ರಮ್ಯಾ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳಿಕ ಇದೀಗ ನಟಿ ಐಶ್ವರ್ಯಾ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಮೆಂಟ್ ಮಾಡಲಾಗಿದೆ.

ಅಶ್ಲೀಲ ಕಮೆಂಟ್ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ನಟಿ ರಮ್ಯಾ ಹಾಗೂ ವಿಜಯಲಕ್ಷ್ಮೀ ದರ್ಶನ್ ಕೇಸ್ ದಾಖಲಿಸಿದ್ದರು. 

ಈ ಪ್ರಕರಣದಲ್ಲಿ ಆರೋಪಿಗಳು ಅರೆಸ್ಟ್ ಕೂಡ ಆಗಿದ್ದಾರೆ. ಆದರೂ ಕಿಡಿಗೇಡಿಗಳು, ಕೆಲ ವಿಲಕ್ಷಣ ಮನಸ್ಥಿತಿಯುಳ್ಳವರು ಬುದ್ಧಿ ಮಾತ್ರ ಕಲಿತಿಲ್ಲ. ಈಗ ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದು, ಇದರಿಂದ ಬೇಸತ್ತ ನಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಟಿ ಐಶ್ವರ್ಯ ಸಿಂಧೋಗಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಅಪ್‌ಲೋಡ್ ಮಾಡಿರುವ ಪೋಸ್ಟ್‌ಗಳಿಗೆ ಸತತವಾಗಿ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಮಾಡಲಾಗುತ್ತಿದೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬರ ಹೆಸರನ್ನು ಉಲ್ಲೇಖಿಸಿ ದೂರು ದಾಖಲಿಸಿದ್ದಾರೆ.

ಈ ಹಿಂದೆ ಕೂಡ ಇದೇ ವ್ಯಕ್ತಿ ಐಶ್ವರ್ಯಾಗೆ ಬೆದರಿಕೆ ಹಾಕಿದ್ದರು. ಆ ವೇಳೆ ಕೇಸ್ ದಾಖಲಾಗಿತ್ತು. ಈಗ ಅದೇ ವ್ಯಕ್ತಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಅವುಗಳ ಮೂಲಕ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST