LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಕೇರಳ ದೇಗುಲಗಳಿಗೆ 12 ಕೋಟಿ ರೂ. ನೆರವು ನೀಡಿದ ಅನಂತ್ ಅಂಬಾನಿ

Advertisement
ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ‌ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಂತ್‌ ಅಂಬಾನಿ ಅವರು ಕೇರಳದ ಅತ್ಯಂತ ಪ್ರಸಿದ್ಧ ದೇವಾಲಯ ಗಳಾದ ತಳಿಪರಂಬ ರಾಜರಾಜೇಶ್ವರ ದೇವಸ್ಥಾನ ಮತ್ತು ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಈ ಎರಡು ದೇವಾಲಯಗಳಿಗೆ ತಲಾ 3 ಕೋಟಿ ರೂ.ಗಳಂತೆ 6 ಕೋಟಿ ರೂ.ಗಳನ್ನು ದೇಣಿಗೆಯಾಗಿ ಸಮರ್ಪಿಸಿದರು.

ಇನ್ನು ರಾಜರಾಜೇಶ್ವರ ದೇಗುಲದ ನವೀಕರಣಕ್ಕಾಗಿ 12 ಕೋಟಿ ರೂ.ಗಳ ಆರ್ಥಿಕ ನೆರವನ್ನು ಘೋಷಿಸಿದರು. ಗುರುವಾಯೂರು ಶ್ರೀ ಕೃಷ್ಣನ ಸನ್ನಿಧಾನದಲ್ಲಿರುವ ಆನೆಗಳ ಕ್ಷೇಮಾ ಭಿವೃದ್ಧಿಗಾಗಿ ಹೆಚ್ಚುವರಿ ಆರ್ಥಿಕ ನೆರವನ್ನು ಅನಂತ್‌ ಅಂಬಾನಿ ಪ್ರಕಟಿಸಿದರು.

ಏಪ್ರಿಲ್‌ 2ರಂದು ರಾತ್ರಿ 8 ಗಂಟೆಗೆ ತಳಿಪರಂಬದ ಐತಿಹಾಸಿಕ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅನಂತ್‌ ಅಂಬಾನಿ ಅವರು ಶಿವನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರು ಸಾಂಪ್ರದಾಯಿಕ ಸೇವೆಗಳಾದ ಪೊನ್ನುಂಕುಡಂ, ಪಟ್ಟಂ, ತಾಲಿ, ನೆಯ್ನಾಮೃತು ಅರ್ಪಿಸಿ ಅಶ್ವಮೇಧ ನಮಸ್ಕಾರವನ್ನು ನೆರವೇರಿಸಿದರು.

ದೇವಾಲಯದ ಪ್ರಸ್ತುತ ನಡೆಯುತ್ತಿರುವ ನವೀಕರಣ ಕಾಮಗಾರಿಗಳಿಗಾಗಿ ಮೊದಲ ಹಂತದಲ್ಲಿ 3 ಕೋಟಿ ರೂಪಾಯಿಗಳ ಚೆಕ್‌ ಅನ್ನು ಹಸ್ತಾಂತರಿಸಿದರು. ರಾಜರಾಜೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಅಂಬಾನಿ ಅವರು ಒಟ್ಟು 12 ಕೋಟಿ ರೂಪಾಯಿಗಳ ಕೊಡುಗೆ ನೀಡುವುದಾಗಿ ತಿಳಿಸಿದ್ದಾರೆ.

ಈ ದೇಣಿಗೆಯಿಂದ ದೇವಸ್ಥಾನದ ಪುರಾತನ ಪೂರ್ವ ಗೋಪುರವನ್ನು ಪುನರ್‌ ನಿರ್ಮಿಸಲಾಗುವುದು. ಸುಮಾರು ಎರಡು ಶತಮಾನಗಳಿಂದ ಶಿಥಿಲಾವಸ್ಥೆ ಯಲ್ಲಿದ್ದ ಈ ಗೋಪುರವು ದೇವಸ್ಥಾನದಷ್ಟೇ ಪುರಾತನವಾದ ಇತಿಹಾಸ ಮತ್ತು ವಾಸ್ತುಶಿಲ್ಪವನ್ನು ಹೊಂದಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್