LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮುಂದಿನ ಮೂರು-ನಾಲ್ಕು ದಿನಗಳಲ್ಲಿ 52 ತಾಲೂಕುಗಳ ಘೋಷಣೆ : ಜಿ. ಪರಮೇಶ್ವರ್ 

Advertisement

ದಾವಣಗೆರೆ : ರಾಜ್ಯದಲ್ಲಿ ಬರಪೀಡಿತ ತಾಲೂಕುಗಳನ್ನು ಒಂದೇ ಹಂತದಲ್ಲಿ ಘೋಷಿಸುವುದಿಲ್ಲ. ನಿಗದಿತ ಮಾನದಂಡಗಳಿಗೆ ಅರ್ಹವಾಗುವ ತಾಲೂಕುಗಳನ್ನು ಹಂತ ಹಂತವಾಗಿ ಪರಿಶೀಲಿಸಿ, ಗ್ರೌಂಡ್ ಟ್ರೂಥಿಂಗ್ ನಡೆಸಿದ ಬಳಿಕ ಘೋಷಿಸಲಾಗುವುದು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬಳಿಕ 24 ತಾಲೂಕುಗಳನ್ನು ಸೇರಿಸಲಾಗಿದೆ. 

ಇನ್ನೂ 52 ತಾಲೂಕುಗಳನ್ನು ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಘೋಷಿಸುತ್ತೇವೆ. ಮುಂದಿನ ಹಂತದಲ್ಲಿ ಸುಮಾರು 50 ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

ಪ್ರಸ್ತುತ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರುವ ಸಾಧ್ಯತೆಯಿದೆ.

ಮುಂಗಾರು ಅವಧಿ ಪೂರ್ಣಗೊಳ್ಳುವವರೆಗೂ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು. ಜಗಳೂರು ಸೇರಿದಂತೆ ಈಗ ಪಟ್ಟಿಯಲ್ಲಿ ಇಲ್ಲದ ತಾಲೂಕುಗಳೂ ಮುಂದಿನ ಹಂತಗಳಲ್ಲಿ ಅರ್ಹತೆ ಪಡೆದಲ್ಲಿ ಘೋಷಣೆಯಾಗಲಿವೆ. ಹೀಗಾಗಿ ತಮ್ಮ ತಾಲೂಕು ಇನ್ನೂ ಪಟ್ಟಿಗೆ ಸೇರಿಲ್ಲ ಎಂಬ ಆತಂಕ ಯಾರಿಗೂ ಬೇಡ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್