LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ISRO ಮತ್ತೊಂದು ಅಭೂತಪೂರ್ವ ಸಾಧನೆ : ಇಒಎಸ್-05 ಯಶಸ್ವಿ ಉಡಾವಣೆ 

Advertisement

ಆಂಧ್ರಪ್ರದೇಶ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಅಭೂತಪೂರ್ವ ಯಶಸ್ಸನ್ನು ಸಾಧಿಸಿದೆ. 

ಆಂಧ್ರಪ್ರದೇಶದ ಶ್ರೀಹರಿಕೋಟಾದ (Sriharikota) ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮುಂಜಾನೆ 2:55ಕ್ಕೆ ಜಿಎಸ್‌ಎಲ್‌ವಿ ಎಫ್17 (GSLV-F17) ರಾಕೆಟ್ ಮೂಲಕ ಅತ್ಯಾಧುನಿಕ ಭೂ ವೀಕ್ಷಣಾ ಉಪಗ್ರಹ 'ಇಒಎಸ್-05' (EOS-05) ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

ರಾಕೆಟ್ ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಇಒಎಸ್-05 ಉಪಗ್ರಹವನ್ನು ನಿಗದಿತ ಕಕ್ಷೆಗೆ ಯಶಸ್ವಿಯಾಗಿ ತಲುಪಿಸಲಾಗಿದೆ ಎಂದು ಇಸ್ರೋ ಪ್ರಕಟಿಸಿದೆ.

ಈ ಉಡಾವಣೆಯು ಜಿಎಸ್‌ಎಲ್‌ವಿ (GSLV) ರಾಕೆಟ್ ಸರಣಿಯ 19ನೇ ಯಶಸ್ವಿ ಕಾರ್ಯಾಚರಣೆಯಾಗಿದೆ. 51.7 ಮೀಟರ್ ಎತ್ತರ ಹಾಗೂ 420.5 ಟನ್ ತೂಕ ಹೊಂದಿರುವ ಜಿಎಸ್‌ಎಲ್‌ವಿ ಎಫ್17 ರಾಕೆಟ್, ಜಿಟಿಒ (GTO) ಕಕ್ಷೆಗೆ ಹೊತ್ತೊಯ್ದ ಅತ್ಯಂತ ತೂಕದ ಉಪಗ್ರಹ ಎಂಬ ಹೆಗ್ಗಳಿಕೆಗೆ 'ಇಒಎಸ್-05' ಪಾತ್ರವಾಗಿದೆ ಎಂದು ಮಿಷನ್ ಡೈರೆಕ್ಟರ್ ಥಾಮಸ್ ಕುರಿಯನ್ ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್