LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಆನ್ಲೈನ್ ಬೆಟ್ಟಿಂಗ್ ಮತ್ತೊಂದು ಬಲಿ : ಬಾಗಲಕೋಟೆಯಲ್ಲಿ ಯುವಕ ಆತ್ಮಹತ್ಯೆ

Advertisement
ಬಾಗಲಕೋಟೆ : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಇದೀಗ ಮತ್ತೊಂದು ಬಲಿಯಾಗಿದೆ. ಆನ್ಲೈನ್ ಬೆಟ್ಟಿಂಗ್ ನಿಂದ ಸಾಲದ ಸುಳಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಚೌಡಯ್ಯ ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ.

ಮನೆಯಲ್ಲಿ ನೇಣು ತೆಗೆದುಕೊಂಡು ರಮೇಶ ಬಂಟನೂರು (21) ಆತ್ಮಹತ್ಯೆಗೆ ಶರಣಾರದ ಯುವಕ ಎಂದು ತಿಳಿದು ಬಂದಿದ್ದು, ರಮೇಶ್ ಬಂಟನೂರು ಜಮಖಂಡಿಯ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಆನ್ಲೈನ್ ಬೆಟ್ಟಿಂಗ್ ನಿಂದ ರಮೇಶ್ ಲಕ್ಷಾಂತರ ಸಾಲ ಮಾಡಿಕೊಂಡಿದ್ದ.

ಈ ಹಿಂದೆ ರಮೇಶ್ ಮಾಡಿಕೊಂಡಿದ್ದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು. ಮತ್ತೆ ಆನ್ಲೈನ್ ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ಧಿವಾದ ಸಹ ಹೇಳಿದ್ದರು.

ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ