LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವು 

Advertisement
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ಬಯಲು ನಾಟಕ ವೀಕ್ಷಿಸುತ್ತಿದ್ದವರ ಮೇಲೆ ಕಮಾನು ಗೋಡೆ (Arch) ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ನಾಟಕದ ಸಂಭ್ರಮವು ಕ್ಷಣಾರ್ಧದಲ್ಲಿ ಮರಣ ಮೃದಂಗವಾಗಿ ಮಾರ್ಪಟ್ಟಿದೆ.

ಹಳ್ಳಿಯ ಬಯಲು ನಾಟಕ ವೀಕ್ಷಿಸುತ್ತಾ ಕಮಾನಿನ ಕೆಳಗೆ ಕುಳಿತಿದ್ದ ಕುಟುಂಬದ ಮೇಲೆ ಹಠಾತ್ತಾಗಿ ಗೋಡೆ ಕುಸಿದು ಬಿದ್ದಿದ್ದು, ಎರಡು ವರ್ಷದ ಸಾನ್ವಿತಾ ಹಾಗೂ ಎಂಟು ವರ್ಷದ ವಿಶ್ವನಾಥ್ ಎಂಬ ಇಬ್ಬರು ಮಕ್ಕಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ಅವಘಡದಲ್ಲಿ ನಾಲ್ವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ.

ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಬಯಲು ನಾಟಕವನ್ನು ವೀಕ್ಷಿಸಲು ಸುಮಾರು 7 ಜನರು ಕಮಾನಿನ ಕೆಳಗೆ ಕುಳಿತಿದ್ದರು. ಈ ವೇಳೆ ಹಠಾತ್ತಾಗಿ ಕಮಾನಿನ ಗೋಡೆ ಕುಸಿದು ಬಿದ್ದಿದೆ. ಪರಿಣಾಮವಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರ ವಿವರ:

ವಿಶ್ವನಾಥ್ (8 ವರ್ಷ)

ಸಾನ್ವಿತಾ (2 ವರ್ಷ)

ನಾಲ್ವರಿಗೆ ಗಂಭೀರ ಗಾಯ: ಈ ಅವಘಡದಲ್ಲಿ ನಾಲ್ವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಕ್ಷ್ಮಿ, ವಿಶಾಲಕ್ಷಿ, ಯಲ್ಲಮ್ಮ ಹಾಗೂ ಬಸಮ್ಮ ಎಂದು ಗುರುತಿಸಲಾಗಿದೆ.

ಗಾಯಾಳುಗಳ ಕಾಲು ಮುರಿದಿದ್ದು, ಬಸಮ್ಮ ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ (ಕೋಮಾ) ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ಮಕ್ಕಳ ದೇಹಗಳನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಂದು ಕ್ಷಣದ ಸಂಭ್ರಮವು ಇಡೀ ಗ್ರಾಮದಲ್ಲಿ ಶೋಕಸಾಗರ ಮೂಡಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ