LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್ : ಟಿವಿ ವಿಕ್ರಂ ಸಂಸ್ಥಾಪಕ ಅರೆಸ್ಟ್

Advertisement

ದಕ್ಷಿಣಕನ್ನಡ : ಮುಖ್ಯಮಂತ್ರಿಯ ಫೋಟೋ ಬಳಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀವಿ ವಿಕ್ರಂ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಮೂಡುಬಿದಿರೆ ಪೊಲೀಸರು ಶುಕ್ರವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.


ಮೂಡುಬಿದಿರೆ ಪಿಎಸ್‌ಐ ಕೃಷ್ಣಪ್ಪ ಅವರ ದೂರಿನಡಿ ಸ್ವಯಂಪ್ರೇರಿತ ಎಫ್‌ಐಆರ್ ದಾಖ ಲಿಸಲಾಗಿತ್ತು.ಬಂಧಿತ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಸ್ಥಳೀಯ ಕೋರ್ಟ್‌ಗೆ ಹಾಜರು ಪಡಿಸಿದ್ದು, ಸೋಮವಾರದವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಫೋಟೋವನ್ನು ಎಡಿಟ್ ಮಾಡಿ, ಕೋಮು ಪ್ರಚೋದನೆ ಎಸಗಿದ ಆರೋಪ ಇವರ ಮೇಲಿದೆ.

ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಲೋಜರ್‌ ನುಗ್ಗಿಸುವ ಧೈರ್ಯ ಮಾಡಿ ನೋಡಿ. ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸಲ್ಲ ಎಂದು ಪೋಸ್ಟ್ ಹಾಕಿದ್ದರು.

ಈ ಪೋಸ್ಟ್, ಎರಡು ಧರ್ಮಗಳ ನಡುವೆ ವೈರತ್ವ ಮತ್ತು ದ್ವೇಷ ಭಾವನೆ ಮೂಡಿಸಿ ಕೋಮು ಗಲಭೆ ಸೃಷ್ಟಿಸುವ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸುವ ಉದ್ದೇಶ ಎಂದು ಹೊಂದಿದೆ ಆರೋಪಿಸಲಾಗಿದೆ. ಇದರನ್ವಯ ಅವರ ವಿರುದ್ಧ ಬಿಎನ್‌ಎಸ್ 353 (2) ಅಡಿ ಸೆ.9 ರಂದು ಮೂಡುಬಿದಿರೆ ಠಾಣೆಯಲ್ಲಿ ಕೇಸು ದಾಖಲಿಸಲಾಗಿತ್ತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ