LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೇಕರಿ ಸಿಬ್ಬಂದಿ ಮೇಲೆ ಹಲ್ಲೆ, ಅಂಗಡಿಯಲ್ಲಿದ್ದ ವಸ್ತುಗಳ ಧ್ವಂಸ

Advertisement

ಹುಬ್ಬಳ್ಳಿ : ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶನಗರದ ಪವನ್ ಸ್ಕೂಲ್ ಸಮೀಪದ ಮಗವೀರ ಬೇಕರಿಯಲ್ಲಿ ದುಷ್ಕರ್ಮಿಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅಂಗಡಿಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿರುವ ಘಟನೆ  ಸಂಜೆ ನಡೆದಿದೆ.

ಲಭ್ಯ ಮಾಹಿತಿಯ ಪ್ರಕಾರ, ಕೆಲ ಯುವಕರು ಬೇಕರಿಗೆ ನುಗ್ಗಿ ಮಾಲೀಕರೊಂದಿಗೆ ವಾಗ್ವಾದ ನಡೆಸಿದ್ದು, ಬಳಿಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ, ಬೇಕರಿಯಲ್ಲಿದ್ದ ಆಹಾರ ಪದಾರ್ಥಗಳು, ಗಾಜಿನ ಶೋಕೇಸ್ ಹಾಗೂ ಇತರೆ ಸಾಮಗ್ರಿಗಳನ್ನು ಹಾನಿಗೊಳಿಸಿ ದಾಂಧಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಲ್ಲೆಯಲ್ಲಿ ಬೇಕರಿ ಸಿಬ್ಬಂದಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಕೆಲಕಾಲ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ವರದಿ  : ಸುಧೀರ್ ಕುಲಕರ್ಣಿ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST