LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಹೆಚ್. ವೈ.ಮೇಟಿ ಮಕ್ಕಳೊಂದಿಗೆ ಸಿಎಂ ಸಂಧಾನ ಯಶಸ್ವಿ : ಬಾಗಲಕೋಟೆ ಟಿಕೆಟ್ ಫೈನಲ್

Advertisement
ಬೆಂಗಳೂರು : ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆಯ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ ಆದರೆ ಬಾಗಲಕೋಟೆಯಲ್ಲಿ ದಿವಂಗತ ಎಚ್.ವೈ ಮೇಟಿ ಅವರ ಮಕ್ಕಳಲ್ಲಿ ಟಿಕೆಟ್ ಗಾಗಿ ಭಿನ್ನಮತ ಸ್ಫೋಟಗೊಂಡಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿಗೆ ಕರೆದು ಸಂಧಾನ ಮಾಡಿದ್ದು, ಇದೀಗ ಅದು ಯಶಸ್ವಿಯಾಗಿದೆ.

ಬೆಂಗಳೂರಿಗೆ ಕರೆಯಿಸಿಕೊಂಡು ಮಹತ್ವದ ಸಭೆ ಮಾಡಿದ್ದು, ತಮ್ಮ ಕುಟುಂಬಕ್ಕೆ ನೀಡುತ್ತೇವೆ. ಆದ್ರೆ, ನಾಲ್ವರಲ್ಲಿ ಒಬ್ಬರಿಗೆ ನೀಡಿದರೆ ಉಳಿದವರು ಪಕ್ಷಕ್ಕೆ ಕೆಲಸ ಮಾಡಬೇಕೆಂದು ಸಿದ್ದರಾಮಯ್ಯ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ.

ಇದಕ್ಕೆ ಮೇಟಿ ಮಕ್ಕಳು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಮೇಟಿ ಕುಟುಂಬಕ್ಕೆ ಎನ್ನುವುದು ಕನ್ಫರ್ಮ್ ಆದಂತಾಗಿದೆ.

ಶಾಸಕ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ ಹಾಗೂ ಮಹಾದೇವಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಮುಖ್ಯವಾಗಿ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಮಹಾದೇವಿ ಬಹಿರಂಗ ಎಚ್ಚರಿಕೆ ನೀಡಿದ್ದರು.

ಅಲ್ಲದೇ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿ ರುವ ಮಹಾದೇವಿ ಅವರ ಅಭಿಮಾನಿಗಳು 'ಮಾರ್ಚ್ 20 ರಂದು ಮಹಾದೇವಿ ಮೇಟಿ ಅವರು ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನುವ ಪೋಸ್ಟ್ ಸಂಚಲನ ಸೃಷ್ಟಿಸಿತ್ತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ