LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Business News

ಬಾಗಲಕೋಟೆ ಉಪಚುನಾವಣೆ : ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12.37 ಲಕ್ಷ ರೂ. ವಶಕ್ಕೆ

Advertisement

ಬಾಗಲಕೋಟೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್9 ರಂದು ಎರಡೂ ಕ್ಷೇತ್ರಗಲಿಗೂ ಉಪಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.


ಮತದಾರರನ್ನು ಓಲೈಸಲು ರಾಜಕೀಯ ನಾಯಕರು ವಿವಿಧ ಕಸರತ್ತುಗಳನ್ನು ಮಾಡುತ್ತಿದ್ದಾರೆ.ಉಪಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕುರುಡು ಕಾಂಚಾಣದ ಸದ್ದು ಕೋಡ ಜೋರಾಗಿದೆ.


ಈ ನಡುವೆ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ದಾಖಲೆ ಲ್ಲದೇ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎರಡು ಪ್ರತ್ಯೇಕ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 12.37 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದೆ.


ಮುದ್ದೆಬಿಹಾಳದಿಂದ ಹೊಸಪೇಟೆ ಮಾರ್ಗವಾಗಿ ಸಾಗಿಸುತ್ತಿದ್ದ ಎರಡು ವಾಹನಗಳನ್ನು ದನ್ನೂರು ಚೆಕ್ ಪೋಸ್ಟ್ ನಲ್ಲಿ ತಡೆದು ಪರಿಶೀಲನೆ ನಡೆಸಿದಾಗ 12.37 ಲಕ್ಷ ಹಣ ಪತ್ತೆಯಾಗಿದೆ.


ಯಾವುದೇ ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣ ಹಾಗೂ ಎರಡೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ