LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಗರೀಕತೆಯ ವ್ಯಾಮೋಹಕ್ಕೆ ನಮ್ಮತನ ಬಿಟ್ಟುಕೊಡುತ್ತಿದ್ದೇವೆ: ಬಾಲಗುರುಮೂರ್ತಿ ವಿಷಾಧ

Advertisement
ತುರುವೇಕೆರೆ :  ನಮ್ಮ ಭಾಷೆ, ಬದುಕು, ಅಸ್ಮಿತೆಯೊಂದಿಗೆ ಯಾರೂ ಹೊಂದಾಣಿಕೆ ಮಾಡಿಕೊಳ್ಳಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ನಾಗರಿಕತೆಯ ವ್ಯಾಮೋಹಕ್ಕೊಳಗಾಗಿ ನಾವು ನಮ್ಮತನವನ್ನು ಬಿಟ್ಟುಕೊಡುತ್ತಿದ್ದೇವೆ ಎಂದು ತುಮಕೂರು ಪ.ಪೂ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ವಿಷಾಧಿಸಿದರು.


ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಯಾಗಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ   ‘ಸುವರ್ಣ ಸಂಭ್ರಮ’ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಗತ ಇತಿಹಾಸದ ಸ್ಮರಣೀಯ ನೆನಪುಗಳು ಭವ್ಯ ಭವಿಷ್ಯವನ್ನು ಕಟ್ಟಿ ಹೊಸ ಇತಿಹಾಸವನ್ನು ನಿರ್ಮಿಸಲು ಸಹಕಾರಿಯಾಗುತ್ತವೆ. ಈ ಹಿನ್ನಲೆಯಲ್ಲಿ ಕಾಲೇಜು ಶಿಕ್ಷಣ, ಅಲ್ಲಿನ ಸಾಧನೆ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿಕೊಡುತ್ತದೆ. ವಿಪರ್ಯಾಸವೆಂದರೆ  ಖಾಸಗಿ ವಲಯದ ಕಾಲೇಜುಗಳು ಪ್ರವೃದ್ಧಮಾನಕ್ಕೆ ಬಂದಂತೆಲ್ಲಾ ಅತ್ಯುತ್ತಮ ಶೈಕ್ಷಣಿಕ ಸಂಪನ್ಮೂಲವುಳ್ಳ ಸರ್ಕಾರಿ ಕಾಲೇಜುಗಳು ಮೂಲೆಗುಂಪಾಗುತ್ತಿವೆ. ಶ್ರೀಮಂತರ ಮಕ್ಕಳು ನಮ್ಮನ್ನು ಆಳುವಂತಾಗಿ ಸಾಮಾನ್ಯ ಬಡ ಮಕ್ಕಳು ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಅಸಹಾಯಕ ಪ್ರೇಕ್ಷಕರಾಗುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು  ಸಮಾಜದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಮಾದರಿಯಾಗಬೇಕು ಎಂದ ಅವರು ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಿದ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ವಿ.ಎನ್. ನಂಜೇಗೌಡರನ್ನು ಅಭಿನಂದಿಸಿದರು.


ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದ ಹಳ್ಳಿಕಾರ್ ತಳಿ ಹಸು ಸಾಕಣೆಗೆ ಹೆಸರುವಾಸಿಯಾದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ ಮಾತನಾಡಿ ‘ಹಳ್ಳಿ ಮಕ್ಕಳಿಗೆ ವೃತ್ತಿ ಶಿಕ್ಷಣ ಕೊಡಿಸಲೆಂದೇ ರೈತರು ಬೆಲೆಬಾಳುವ ಜಮೀನುಗಳನ್ನು ಮಾರುತ್ತಿದ್ದಾರೆ. ಇದೊಂದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಆದರೆ ಬಹುತೇಕರು ಅತ್ತ ವೃತ್ತಿ ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳಲಾಗದೆ ಇತ್ತ ಕೃಷಿಗೆ ಮರಳಲಾರದೆ ತ್ರಿಶಂಕು ಸ್ಥಿತಿ ತಲುಪಿದ್ದಾರೆ.   ಶಿಕ್ಷಣ ವ್ಯಾಪಾರವಾಗಿದೆ. ಕೃಷಿ ಕೆಲಸದ ಬಗೆಗಿರುವ ಕೀಳರಿಮೆ ಹೋಗಬೇಕು.  ವಿದ್ಯಾರ್ಥಿಗಳಲ್ಲಿ ಕೃಷಿ ಚಟುವಟಿಕೆಗಳ ಕುರಿತು ಜ್ಞಾನ ಮೂಡಿಸುವ ಆರಂಭಿಕ ಕಡ್ಡಾಯ ಕೃಷಿ ಶಿಕ್ಷಣ ನೀಡಬೇಕು.   ತುರುವೇಕೆರೆ ತಾಲ್ಲೂಕು ಹಳ್ಳಿಕಾರ್ ತಳಿ ಅಭಿವೃದ್ಧಿ ಕೇಂದ್ರವಾಗಿದ್ದು ರೈತರು ಮನೆಗೊಂದು ಹಳ್ಳಿಕಾರ್ ಹಸು ಸಾಕಬೇಕು ಎಂದು ಕಿವಿಮಾತು ಹೇಳಿದರು.


ಸಮಾರಂಭದಲ್ಲಿ ಡಾ.ಬಾಲಗುರುಮೂರ್ತಿ ಹಾಗೂ ವರ್ತೂರು ಸಂತೋಷ್ ಅವರನ್ನು ಅಭಿನಂದಿಸಲಾಯಿತು. ವಿಭಿನ್ನ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಡಾ.ನಂಜಪ್ಪ, ಡಿ.ಬಿ.ವಿನುತಾ ಶ್ರೀ, ತುರುವೇಕೆರೆ ಪ್ರಸಾದ್, ಡಿ.ಬಿ.ಹೊನ್ನೇಶ್ ಗೌಡ ಇವರನ್ನು ಸನ್ಮಾನಿಸಲಾಯಿತು.  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಯಗಣಪತಿ ಸೇವಾ ಸಮಾಜದ ಅಧ್ಯಕ್ಷ ಟಿ.ಆರ್. ಮಲ್ಲಿಕಾರ್ಜುನ್ ಬಹುಮಾನ ವಿತರಿಸಿದರು.


 ತಾ.ಪಂ. ಇ.ಓ. ಪಿ.ಎಸ್. ಅನಂತರಾಜು, ಬಿ.ಇ.ಓ ಸೋಮಶೇಖರ್, ಕಸಾಪ ಅಧ್ಯಕ್ಷ ಡಿ.ಪಿ.ರಾಜು, ಪ್ರಾಂಶುಪಾಲರ ಸಂಘದ ನಿ.ಪೂ. ಅಧ್ಯಕ್ಷ ಪ್ರಭಾಕರ ರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಾಪಣ್ಣ, ಉಪಪ್ರಾಂಶುಪಾಲ ಜಿ.ಬಿ. ವೆಂಕಟೇಶ್, ಟಿ.ಎಸ್. ಬೋರೇಗೌಡ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿ.ಎನ್.ನಂಜೇಗೌಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಮಲ ವರದಿ ವಾಚಿಸಿದರು. ಸ್ವಾಮಿ ವಂದಿಸಿದರು. ಸೋನಾಕ್ಷಿ, ಅರ್ಬಿಯಾ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು  ಶೋಭಾ, ರಕ್ಷಿತಾ, ಮಾನಸ ನಿರ್ವಹಿಸಿದರು.

ವರದಿ: ಗಿರೀಶ್ ಕೆ‌ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ