LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ ಹುದ್ದೆಗಳ ನೇಮಕ ಮಾಡಬೇಕು : ಬಸವರಾಜ ಬೊಮ್ಮಾಯಿ 

Advertisement
ಬೆಂಗಳೂರು: ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ನೇಮಕ ಮಾಡುವ ಸಂದರ್ಭದಲ್ಲಿ ಒಳ ಮೀಸಲಾತಿ ಪರಿಗಣನೆಗೆ ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗ ಮಾತನಾಡಿದ ಅವರು, ರಾಜ್ಯಪಾಲರು ಒಳ ಮೀಸಲಾತಿಗೆ ಅಂಕಿತ ಹಾಕಿ ಆದೇಶ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ.

ರಾಜ್ಯ ಸರ್ಕಾರ ಭರ್ತಿ ಮಾಡಬೇಕಿರುವ ನೇಮಕಾತಿಗೆ ಯಾವ ರೀತಿ ಮಾಡಬೇಕು ಎನ್ನುವ ಬಗ್ಗೆ ಸ್ಪಷ್ಟನೆ ಬೇಕಿದೆ. ಮನಸ್ಸು ಮಾಡಿದರೆ ಸಾಧ್ಯತೆ ಇದೆ.

ಆದರೆ, ಅವರು ಗೊಂದಲಕ್ಕೆ ಸಿಲುಕಿದ್ದಾರೆ. ನೇಮಕಾತಿಯ ಮೊದಲು ಎಲ್ಲಾ ಸಮುದಾಯದ ಜೊತೆ ಚರ್ಚೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಆಗಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಕಾನೂನು ಮಾಡಿದ್ದಾರೆ. ಹಾಗಾಗಿ ಎಲ್ಲ ಸಮುದಾಯದವರೂ ಒಳ ಮೀಸಲಾತಿ ಕೊಡಿ ಅಂತ ಹೇಳಿದ್ದಾರೆ. ಸಮಸ್ಯೆ ಸರಳೀಕರಣ‌ ಮಾಡಬೇಕು. ಕಾನೂನು ತಜ್ಞರ ಸಲಹೆ ಪಡೆದು ಮಾಡಬೇಕು.

ಸಂವಿಧಾನದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೊಡಬೇಕು ಅಂತ ಅಂಬೇಡ್ಕರ್ ಹೇಳಿದ್ದಾರೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ಮುಂದೆ ಸಮುದಾಯಗಳು ಹೋಗಿವೆ. ಅದನ್ನ ನೋಡಿ ಕ್ರಮ ಆಗಬೇಕು ಎಂದು ಹೇಳಿದರು.

ಗುಪ್ತಚರ ಇಲಾಖೆ ದುರ್ಬಳಕೆ ಆಗುತ್ತಿದಿಯಾ ಎನ್ನುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗುಪ್ತಚರ ಇಲಾಖೆ ಸಿಎಂ ಬಳಿ ಇರುತ್ತದೆ. ರಾಜಕೀಯ ಅಸ್ಥಿರತೆ ಇದ್ದಾಗ ಸಿಎಂ ಯಾವ ರೀತಿ ಬಳಕೆ ಮಾಡುತ್ತಾರೆ. ತಮ್ಮದೇ ಪಕ್ಷದ ಶಾಸಕರ ಮೇಲೆ ಗುಪ್ತಚರ ಮಾಡುತ್ತಾರೋ. ಅಥವಾ ನೇರವಾಗಿ ಸಂಪರ್ಕ ಮಾಡುರೋ ಅನ್ನುವುದರ ಮೇಲೆ ನಿರ್ಧಾರ ಆಗಲಿದೆ ಎಂದು ಹೇಳಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ