LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಬೆಳಗಾವಿ ಗಡಿ ವಿವಾದ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

Advertisement

ಮುಂಬೈ : ಕರ್ನಾಟಕದ ಅವಿಭಾಜ್ಯ ಅಂಗವಾದ ಬೆಳಗಾವಿ ಕುರಿತು ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಬೆಳಗಾವಿ ಗಡಿ ವಿವಾದ(belagavi border dispute) ಸಂಬಂಧ ಸುಪ್ರೀಂಕೋರ್ಟ್‌(Supreme court)ನಲ್ಲಿ ತ್ವರಿತ ವಿಚಾರಣೆ ಕೋರಿ ಅರ್ಜಿ ಸಲ್ಲಿಸುವ, ಕರ್ನಾಟದಲ್ಲಿನ ಮರಾಠಿ ಪರ ಹೋರಾಟಗಾರರಿಗೆ ಎಲ್ಲಾ ರೀತಿಯ ಕಾನೂನು ನೆರವು ನೀಡುವ ಮತ್ತು ರಾಷ್ಟ್ರೀಯ ಭಾಷಾ ಅಲ್ಪಸಂಖ್ಯಾತರ ಆಯೋಗಕ್ಕೆ ದೂರು ನೀಡುವ ಘೋಷಣೆ ಮಾಡಿದ್ದಾರೆ.

ಇದರ ಜೊತೆ ಜೊತೆಗೇ ನ್ಯಾಯಾಲಯದ ಹೊರಗೆ ಮಾತುಕತೆ ಮೂಲಕ ವಿಷಯ ಇತ್ಯರ್ಥ ಸಂಬಂಧ ಮಹಾರಾಷ್ಟ್ರ ಮತ್ತು ಕರ್ನಾಟಕದ ತಲಾ ಮೂರು ಸಚಿವರ ಸಭೆ ಆಯೋಜಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಮನವಿ ಮಾಡುವುದಾಗಿಯೂ ತಿಳಿಸಿದ್ದಾರೆ.

ಗಡಿ ವಿವಾದ ಸಂಬಂಧ ಬುದವಾರ ಇಲ್ಲಿನ ವಿಧಾನಭವನದಲ್ಲಿ ಉನ್ನತ ಮಟ್ಟದ ಸಭೆ ಆಯೋಜಿಸಲಾಗಿತ್ತು. ಇದರಲ್ಲಿ ಸರ್ಕಾರದ ಹಿರಿಯ ಸಚಿವರು, ವಿಪಕ್ಷ ನಾಯಕರು ಮತ್ತು ಕರ್ನಾಟಕದ ಮರಾಠಿ ಭಾಷಿಕರ ನಿಯೋಗ ಭಾಗಿಯಾಗಿತ್ತು.

 ಎನ್‌ಸಿಪಿ (ಪವಾರ್‌ ಬಣ) ನಾಯಕ ಶರದ್‌ ಪವಾರ್‌ ಕೂಡ 3 ದಶಕಗಳ ಬಳಿಕ ವಿಧಾನಭವನದಲ್ಲಿ ನಡೆದ ಈ ಸಭೆಯಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, 'ಮಹಾರಾಷ್ಟ್ರ ದೀರ್ಘಕಾಲದಿಂದ ಹೋರಾಟ ನಡೆಸುತ್ತಿದೆ. ಇಡೀ ಮಹಾರಾಷ್ಟ್ರದ ಜನತೆ ಗಡಿ ಭಾಗದಲ್ಲಿರುವ ಮರಾಠಿಗರ ಪರವಾಗಿ ನಿಲ್ಲಲಿದೆ. ಮರಾಠಿ ಭಾಷಿಕ ಹೋರಾಟಗಾರರಿಗೆ ಅಗತ್ಯವಾದ ಎಲ್ಲಾ ಕಾನೂನು, ಆರ್ಥಿಕ ನೆರವು ನೀಡಲು ಸರ್ಕಾರ ಸಿದ್ಧ' ಎಂದು ಭರವಸೆ ನೀಡಿದ್ದಾರೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST