LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬೆಳಗಾವಿ ಎರಡು ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ : ಲಕ್ಷ್ಮೀ ಹೆಬ್ಬಾಳಕರ್ 

Advertisement

ಬೆಳಗಾವಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವುದು ಉತ್ತರ ಕರ್ನಾಟಕದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ ಎಂದು ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಜನರಿಗೆ ಸಾಕಷ್ಟು ನಿರೀಕ್ಷೆಗಳಿದ್ದು, ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಗೃಹಲಕ್ಷ್ಮೀ ಯೋಜನೆ ಕುರಿತು ಮಾತನಾಡಿದ ಅವರು, ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತಂದಿರುವ ಈ ಯೋಜನೆ ವಿಶ್ವದಲ್ಲೇ ಮಾದರಿಯಾಗಿದ್ದು, ಅದರ ಯಶಸ್ಸನ್ನು ಗಮನಿಸಿ ಎನ್‌ಡಿಎ ಆಡಳಿತದ ಕೆಲವು ರಾಜ್ಯಗಳೂ ಇದೇ ಮಾದರಿಯ ಯೋಜನೆಗಳನ್ನು ಜಾರಿಗೊಳಿಸಿವೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಮಟ್ಟದಲ್ಲಿಯೂ ಗೃಹಲಕ್ಷ್ಮೀ ಯೋಜನೆಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದ ಅವರು, ಯೋಜನೆ ಕುರಿತು ವಿಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST