LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಂಗಾಳ ಆರಾಧನಾ ಸ್ಥಳಗಳ ಮೇಲೆ ದಾಳಿ ನಿಲ್ಲಿಸಲಿ : ಎಂ, ಗಂಗಾಧರ

Advertisement

ಸಿಂಧನೂರು : ಆರ್‌ಎಸ್‌ಎಸ್–ಬಿಜೆಪಿ ನೇತೃತ್ವದ ಹಿಂದೂತ್ವ ಫ್ಯಾಸಿಸಂ ವಿರುದ್ಧ ಪ್ರಜಾಸತ್ತಾತ್ಮಕ ಶಕ್ತಿಗಳು  ಪಶ್ಚಿಮ ಬಂಗಾಳದಲ್ಲಿ ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳ ಮೇಲೆ ನಡೆಯುತ್ತಿರುವ ದಾಳಿಗಳು, ದ್ವೇಷದ ರಾಜಕೀಯ ಮತ್ತು ಭೀತಿಯ ವಾತಾವರಣವನ್ನು ನಿರ್ಮಿಸುವ ಪ್ರಯತ್ನಗಳು ಅತ್ಯಂತ ಆತಂಕಕಾರಿ ಬೆಳವಣಿಗೆಗಳಾಗಿವೆ ಎಂದು ಸಿಪಿಐಎಂಎಲ್ ರೇಡ್ ಸ್ಟಾರ್ ರಾಜ್ಯ ಸಮಿತಿ ಸದಸ್ಯ ಎಂ, ಗಂಗಾಧರ ಅಸಮಾಧಾನ ವ್ಯಕ್ತಪಡಿಸಿ ಇವು ಕೇವಲ ಪ್ರತ್ಯೇಕ ಘಟನೆಗಳಲ್ಲ ದೇಶದ ಸಂವಿಧಾನಬದ್ಧ, ಜಾತ್ಯಾತೀತ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ಸಂಘಟಿತ ದಾಳಿಗಳ ಭಾಗವಾಗಿವೆ ಬಂಗಾಳದಲ್ಲಿ ನಡೆಯುತ್ತಿರುವ ಈ ಫ್ಯಾಸಿಸ್ಟ್ ಪ್ರವೃತ್ತಿಗಳನ್ನು ತೀವ್ರವಾಗಿ ಖಂಡಿಸಿ ಧರ್ಮ, ಜಾತಿ ಮತ್ತು ಸಮುದಾಯಗಳ ನಡುವೆ ದ್ವೇಷ ಬಿತ್ತಿ ರಾಜಕೀಯ ಲಾಭ ಪಡೆಯುವ ಆರ್‌ಎಸ್‌ಎಸ್–ಬಿಜೆಪಿಯ ಹಿಂದೂತ್ವ ರಾಜಕೀಯವು ದೇಶದ ಏಕತೆ ಮತ್ತು ಪ್ರಜಾಪ್ರಭುತ್ವಕ್ಕೆ ಗಂಭೀರ ಅಪಾಯವಾಗಿದೆ.

ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆ ಮತ್ತು ಜನರ ಹಕ್ಕುಗಳನ್ನು ರಕ್ಷಿಸಲು ಎಲ್ಲ ಪ್ರಗತಿಪರ ಹಾಗೂ ಪ್ರಜಾಸತ್ತಾತ್ಮಕ ಶಕ್ತಿಗಳು ಸಂಘಟಿತರಾಗಿ ಹೋರಾಟವನ್ನು ತೀವ್ರಗೊಳಿಸಬೇಕೆಂದು ಸಿಪಿಐಎಂಎಲ್ ರೆಡ್ ಸ್ಟಾರ್ ಕರ್ನಾಟಕ ರಾಜ್ಯ ಸಮಿತಿಯು ಕರೆ ನೀಡುತ್ತದೆ ಎಂದರು .

 

ವರದಿ:ಬಸವರಾಜ ಬುಕ್ಕನಹಟ್ಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST