LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಒಳ ಮೀಸಲು ವಿರೋಧಿಸಿ 25ರಂದು ಬೆಂಗಳೂರು ಚಲೋ

Advertisement
ಭಾಲ್ಕಿ: ನ್ಯಾಯಮೂರ್ತಿ ನಾಗಮೋಹನ್ ದಾಸ ವರದಿಯನ್ನು ಧಿಕ್ಕರಿಸಿ ಪ.ಜಾ ಬಲಗೈ ಸಮುದಾಯದ ಮುಖಂಡರು ಮಾ.25ರಂದು ಬೆಂಗಳೂರಿನಲ್ಲಿ ಜ್ಞಾನ ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಷ.ಜಾ ಬಲಗೈ ಸಮುದಾಯ ಒಕ್ಕೂಟದ ಮುಖಂಡರು ತಿಳಿಸಿದರು.

https://youtu.be/Zv-7KnnoQEY

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಪ್ರತಿಭಟನಾ ಸಮಾವೇಶದ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.ರಾಜ್ಯ ಸರ್ಕಾರವು ಶೇ.17+7ರ ಮೀಸಲಾತಿ ಪ್ರಮಾಣಕ್ಕೆ ರಾಜ್ಯ ಉಚ್ಚನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು ಸಾಮಾನ್ಯ ವರ್ಗದವರು ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಹೋರಾಟ ರೂಪಿಸಿದ ಹಿನ್ನೆಲೆಯಲ್ಲಿ ಫೆ.27ರಂದು ಶೇ.15+3ರ ಪ್ರಮಾಣದಲ್ಲಿ ಒಳಮೀಸಲಾತಿ ರಹಿತ ನೇಮಕ ಮಾಡಲು ಆದೇಶ ಹೊರಡಿಸಿ ಗೆಜೆಟ್‌ನಲ್ಲಿ ಪಕಟಿಸಿರುತ್ತದೆ. ಆದರೆ, 101 ಜಾತಿಗಳಲ್ಲಿ ಒಂದು ಸಮುದಾಯವು ಶೇ.15+3 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬೇಕೆಂದು ಹೋರಾಟ ಮಾಡುತ್ತಿರುವ ಹಿನ್ನೆಲೆ ಮಾ.27ರಂದು ಎ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ಏರ್ಪಡಿಸಲಾಗಿದ್ದು, ಸದರಿ ಸಭೆಯಲ್ಲಿ ಶೇ 15 + 30 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬಾರದೆಂದು ತಪ್ಪಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ವಿಶ್ವನಾಥ ಮೋರೆ, ಲಕ್ಷ್ಮಣ ಗುಪ್ತ, ಪ್ರದೀಪ್ ಜಂಜಿರೆ, ಕೀರ್ತಿರತನ್ ಸೋನಾಳೆ, ರಾಜಕುಮಾರ್‌ಮೋರೆ, ಪ್ರಶಾಂತ್ ಕೋಟಗಿರ, ವಿಲಾಸ್ ಮೋರೆ, ಮನೋಹರ್‌ಂತಪುರೆ ಇನ್ನು ಅನೇಕ ಬಲಗೈ ಸಮುದಾಯದ ಮುಖಂಡರು ಇದ್ದರು.

ವರದಿ : ಸಂತೋಷ ಬಿಜಿ ಪಾಟೀಲ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್