LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | Politics News

BIG NEWS : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಣ್ಣಾಮಲೈ ರಾಜೀನಾಮೆ 

Advertisement

ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅವರು ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಇದಾದ ಬೆನ್ನಲ್ಲೇ, ಇಂದು ಸಂಜೆ 4 ಗಂಟೆಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಅವರನ್ನು ಮುಕ್ತಗೊಳಿಸಿ, ಅವರ ಜಾಗಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಕ ಮಾಡಿದ ದಿನದಿಂದಲೂ ಅಣ್ಣಾಮಲೈ ಪಕ್ಷದಲ್ಲಿ ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು ಲೋ ಪ್ರೊಫೈಲ್ ಕಾಯ್ದುಕೊಂಡಿದ್ದ ಅವರು, ಬಿಜೆಪಿಯಲ್ಲಿ ತಮಗೆ ಉಜ್ವಲ ಭವಿಷ್ಯವಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದರು ಎನ್ನಲಾಗಿತ್ತು. ಇದೀಗ ಆ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಅವರು ಅಧಿಕೃತವಾಗಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST