LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ 

Advertisement
ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ನಂದಿಕೂರಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜ್ಯೋತಿ ಪಾಟೀಲ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ್ ಮನೆ ಮುಂದೆ ಇವರು ಸೂಸೈಡ್ ಮಾಡಿಕೊಂಡಿದ್ದಾರೆ.

ಮಲ್ಲಿನಾಥ್ ಮನೆಗೆ ಹೋಗಿ ಜ್ಯೋತಿ ಬಾಗಿಲು ತಟ್ಟಿದ್ದಾರೆ. ಮಲ್ಲಿನಾಥ್ ಅವರ ಪತ್ನಿ ಬಾಗಿಲು ತೆರೆದಿದ್ದಾರೆ. ಕೂಡಲೇ ಜ್ಯೋತಿ ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST