LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Advertisement
ಗದಗ: ಲಂಚ ಪಡೆದ ಆರೋಪದಡಿ ಇಂದು ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.

ರೆಡ್​​​​ ಹ್ಯಾಂಡ್​​ ಆಗಿ ಲಮಾಣಿ ತಮ್ಮ ಆಸ್ಪತ್ರೆಯಲ್ಲೇ ಗುತ್ತಿಗೆದಾರ ವಿಜಯ್ ಪೂಜಾರ್ ಎಂಬುವವರಿಂದ ಐದು ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

ಈ ವೇಳೆ ಚಂದ್ರು ಲಮಾಣಿ ಮತ್ತವರ ಖಾಸಗಿ ಪಿಎ ಸೇರಿದಂತೆ ಸರ್ಕಾರಿ ಆಪ್ತ ಸಹಾಯಕನನ್ನು ವಶಕ್ಕೆ ಪಡೆಯಲಾಗಿತ್ತು.

ಇದೀಗ ಬಂಧನವಾಗಿದ್ದು, ಕೆಲವೇ ಕ್ಷಣಗಳಲ್ಲಿ ಗದಗ ಲೋಕಾಯುಕ್ತ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಮುಂದಿನ ವಿಚಾರಣೆಗಾಗಿ ಆರೋಪಿತರನ್ನು ಲೋಕಾಯುಕ್ತ ಪೊಲೀಸರು ಕಷ್ಟಡಿಗೆ ಕೇಳುವ ನಿರೀಕ್ಷೆ ಇದೆ.

ಕಮಿಷನ್​​ಗೆ ಬೇಡಿಕೆ ಇಟ್ಟಿದ್ದ ಶಾಸಕ!

ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಐದು ಲಕ್ಷ ರೂಪಾಯಿಯನ್ನು ಗುತ್ತಿಗೆದಾರ ವಿಜಯ್​​​​​​​​​ ಎಂಬುವವರಿಂದ ಲಂಚ ಪಡೆಯುವಾಗ ರೆಡ್​​ ಹ್ಯಾಂಡ್​ ಆಗಿ ಲಾಕ್​ ಆಗಿದ್ದಾರೆ.

ರಸ್ತೆಯೊಂದರ ತಡೆಗೋಡೆ ನಿರ್ಮಾಣದ ಕಾಮಗಾರಿಗಾಗಿ ಚಂದ್ರು ಲಮಾಣಿ 11 ಲಕ್ಷ ರೂಪಾಯಿ ಕಮಿಷನ್​​ಗೆ ಬೇಡಿಕೆ ಇಟ್ಟಿದ್ದರಂತೆ. ಮುಂಗಡವಾಗಿ ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ಲೋಕಾ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ಅವರ ಬಂಧನವಾಗಿದೆ.

ಲಕ್ಷ್ಮೇಶ್ವರ ಪಟ್ಟಣದಲ್ಲಿ ಚಂದ್ರು ಲಮಾಣಿಗೆ ಸೇರಿದ ಬಾಲಾಜಿ ಆಸ್ಪತ್ರೆಯಲ್ಲಿ ಗುತ್ತಿಗೆದಾರ ‌ವಿಜಯ್ ಪೂಜಾರ ಎಂಬುವರಿಂದ ಹಣ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಧಾರವಾಡ ಲೋಕಾಯುಕ್ತ ಎಸ್​ಪಿ ಸಿದ್ದಲಿಂಗಪ್ಪ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಹಾಗೂ ಕಮಿಷನ್​ ದಂಧೆಯಲ್ಲಿ ಸರ್ಕಾರ ತೊಡಗಿದೆ ಎಂದು ಗಂಭೀರವಾಗಿ ಅಸ್ತ್ರವಾಗಿಸಿಕೊಂಡು ಆರೋಪಿಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ಇದೀಗ ಚಂದ್ರು ಲಮಾಣಿಯ ಈ ಪ್ರಕರಣದಿಂದ ತೀವ್ರ ಮುಜುಗರವುಂಟು ಮಾಡಿದಂತಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ