LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಟ್ಟಣದಲ್ಲಿ ಸಂಭ್ರಮ 

Advertisement

ಮೊಳಕಾಲ್ಮುರು : ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ  ಸಂಭ್ರಮಾಚರಣೆ ಮಾಡಿದರು.

ಇಲ್ಲಿನ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷ ವ್ಯಕ್ತ ಪಡಿಸಿ ಪ್ರಧಾನಿ ಮೋದಿ,ಗೃಹ ಸಚಿವ ಅಮಿತ್ ಶಾ,ನಿತಿನ್ ನಬಿ ಅವರಿಗೆ  ಜೈ ಘೋಷಣೆಗಳು ಕೂಗಿದರು.

ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಪಿ.ಎಂ. ಮಂಜುನಾಥ್ ಮಾತನಾಡಿ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ಸೇರಿ ಮೂರು  ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರಾ ಗೆಲುವು ಸಾಧಿಸಿ  ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ನರೇಂದ್ರ ಮೋದಿಯವರ ಅಭಿವೃದ್ಧಿಯನ್ನು  ಮೆಚ್ಚಿ ದೇಶದ ಜನತೆ ಬಿಜೆಪಿಯನ್ನು ಕೈ ಹಿಡಿದಿದ್ದಾರೆ.ಈ ಗೆಲುವಿಂದಾಗಿ ಪಕ್ಷ ಗಟ್ಟಿಯಾಗಿದೆ ಎನ್ನುವುದನ್ನು ಸಾಬೀತು ಪಡಿಸಿದೆ.ಇದು ಮೋದಿಯವರ ಕೈ ಬಲಪಡಿಸಿದಂತಾಗಿದೆ ದೇಶ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀರಾಮರೆಡ್ಡಿ,ಪಕ್ಷದ ಹಿರಿಯ ಮುಖಂಡರಾದ ಡಿ.ಎಂ..ಈಶ್ವರಪ್ಪ,ಟಿ.ಟಿ.ರವಿ. ಸಿದ್ದಣ್ಣ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ,ಉಪಾಧ್ಯಕ್ಷ ತಿಪ್ಪೇಸ್ವಾಮಿ, ಭೀಮಣ್ಣ, ಮಂಜಣ್ಣ,ಡಿಶ್ ರಾಜು, , ಪ್ರಧಾನ ಕಾರ್ಯದರ್ಶಿಗಳಾದ ನೇರ್ಲಹಳ್ಳಿ ಪ್ರಭಾಕರ ಹರೀಶ್ ಕಡೆತೋಟ,ರಮೇಶ್ ದಳವಾಯಿ, ಮಂಜು, ನಾಗರಾಜ್,ಜಿ.ಎಲ್.ತಿಪ್ಪೆಸ್ವಾಮಿ,ಮರಿಸ್ವಾಮಿ, ಕುಮಾರ್ ಸ್ವಾಮಿ, ರಾಮಾಂಜನೇಯ, ಹರೀಶ್ ಪಾಳೇಗಾರ, ಸಾಗರ್,ಬಸವರಾಜ್, ಚಿತ್ತಯ್ಯ ಇದ್ದರು.

 ವರದಿ : ಪಿಎಂ ಗಂಗಾಧರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ