LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ 

Advertisement
ಬೆಂಗಳೂರು: ಕಳೆದ ನಿನ್ನೆಯಿಂದ ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ.

ಪಾಕಿಸ್ತಾನ ಐಎಸ್‌ಐ ಬ್ರ್ಯಾಂಚ್ ಇನ್ ತಮಿಳುನಾಡು ಹೆಸರಿನಲ್ಲಿ ಈ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ.

ದಾವಣಗೆರೆ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಮಾಡಲಾಗಿದೆ. ಕೆಲ ದಿನಗಳಲ್ಲಿ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ವಿಜಯಪುರ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಮಾಡಲಾಗಿದೆ. ಹೀಗಾಗಿ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ದಳವು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ತುಮಕೂರು ಡಿಸಿ ಕಚೇರಿ ಸ್ಪೋಟಿಸುವುದಾಗಿಯೂ ಬೆಳಗ್ಗೆ 7ಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು.

ತುಮಕೂರು ಡಿಸಿ ಶುಭ ಕಲ್ಯಾಣ್ ಇ-ಮೇಲ್ ಐಡಿಗೆ ಬೆದರಿಕೆ ಇ-ಮೇಲ್ ಮಾಡಲಾಗಿತ್ತು. ಡಿಸಿ ಕಚೇರಿಯಲ್ಲಿ ತಪಾಸಣೆಯನ್ನು ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ನಡೆಸಲಾಗಿತ್ತು.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST