LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಡ ಬಾಂಬ್ ಸ್ಫೋಟ:ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಎಮ್ಮೆ

Advertisement
ಹಾನಗಲ್‌ : ಕಾಡು ಪ್ರಾಣಿಗಳನ್ನು ಬೇಟೆಯಾಡುವ ಉದ್ದೇಶದಿಂದ ಯಾರೋ ಕಿಡಿಗೇಡಿಗಳು ಅಕ್ರಮವಾಗಿ ಇಟ್ಟಿದ್ದ ನಾಡ ಬಾಂಬ್ ಸ್ಫೋಟಗೊಂಡ ಪರಿಣಾಮ ಎಮ್ಮೆಯೊಂದು ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೀರೂರು ಗ್ರಾಮದಲ್ಲಿ ನಡೆದಿದೆ..

ಹೌದು ಶಿವನಗೌಡ ಪಾಟೀಲ್ ಎಂಬುವರಿಗೆ ಸೇರಿದ ಮಾವಿನ (ಹೊಲ) ಕೊಪ್ಪಲದಲ್ಲಿ ಯಾರೋ ಕಿಡಿಗೇಡಿಗಳು ನಾಡ ಬಾಂಬ್ ಇಟ್ಟಿದ್ದಾರೆ. ಶುಕ್ರವಾರ ಮದ್ಯಾಹ್ನ ಮೇವು ತಿಂದ ಎಮ್ಮೆ ನೀರು ಕುಡಿಯಲು ಅಂತ ತೆರಳುವ ವೇಳೆ ನಾಡ ಬಾಂಬ್ ನ್ನು ಕಚ್ಚಿದೆ, ಪರಿಣಾಮ ನಾಡ ಬಾಂಬ್ ಸ್ಫೋಟಗೊಂಡಿದೆ, ಸ್ಫೋಟದಿಂದ ಎಮ್ಮೆಯ ಬಾಯಿ ಛಿದ್ರವಾಗಿ ರಕ್ತಸ್ರಾವದಿಂದ ಸಾವು ಬದುಕಿನ ನಡುವೆ ನರಳಾಡುತ್ತಿದೆ.

ಇನ್ನೂ ಗಂಭೀರವಾಗಿ ಗಾಯಗೊಂಡ ಎಮ್ಮೆ ಗ್ರಾಮದ ಷಣ್ಮುಖಗೌಡ ಪಾಟೀಲ್ ರೈತನದು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿದ ಹಾನಗಲ್‌ ಪೊಲೀಸ್ ಠಾಣೆ ಪಿಎಸ್ಐ ಸಂಪತ್ ಆನಿಕಿವಿ ಮತ್ತು ಸಿಬ್ಬಂದಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಈ ಹಿಂದೆಯೂ ಇದೇ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶೇಕಪ್ಪ ರವರಿಗೆ ಸೇರಿದ ಎರೆಡು ಹೋರಿಗಳು ನಾಡಬಾಂಬ್ ಸ್ಫೋಟದಿಂದ ಮೃತಪಟ್ಟಿದ್ದು ಇರುತ್ತದೆ.

ಇನ್ನೂ ಪೊಲೀಸರು ನಾಡ ಬಾಂಬ್ ಇಟ್ಟ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಏನು ತಿಳಿಯದ ಮುಗ್ದ, ಮೂಖ ಪ್ರಾಣಿಗಳ, ಪ್ರಾಣದ ಜೊತೆಗೆ ಚಲ್ಲಾಟ ಆಡುತ್ತಿರುವ, ಮಾನವೀಯತೆನೆ ಇಲ್ಲದ ಇಂತಹ ನೀಚ ಕೃತ್ಯ ಎಗುವ ಕಿಡಿಗೇಡಿಗಳನ್ನು ಕಂಬಿ ಏಣಿ ಸುವಂತೆ ಮಾಡಬೇಕಾಗಿದೆ.

 

ವರದಿ :ರಮೇಶ್ ತಾಳಿಕೋಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ