LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಾಜ್ಯದಲ್ಲಿ ಯಾವಾಗ ಬೇಕಾದರೂ ಮದ್ಯಂತರ ಚುನಾವಣೆ : ಬಿ. ವೈ ವಿಜಯೇಂದ್ರ 

Advertisement

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಸಂಗಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿರುವ ಅವರು, ಇದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದ "ಮೊದಲ ವಿಕೆಟ್ ಪತನ" ಎಂದು ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜೇಂದ್ರ, ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯ ನಾಯಕರಾಗಿದ್ದು, ಅವರ ರಾಜೀನಾಮೆಯ ವೈಯಕ್ತಿಕ ನಿರ್ಧಾರದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು. ಆದರೆ, ಈ ಬೆಳವಣಿಗೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತು ಅಸಮಾಧಾನವನ್ನು ಬಹಿರಂಗಪಡಿಸಿದೆ ಎಂದು ಅವರು ಪ್ರತಿಪಾದಿಸಿದರು.

ಅಧಿಕಾರಕ್ಕಾಗಿ ಕಿತ್ತಾಟ: ವಿಜೇಂದ್ರ ಆರೋಪ

ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿ ಅಥವಾ ಜನರ ಹಿತಾಸಕ್ತಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ವಿಜೇಂದ್ರ ಕಿಡಿಕಾರಿದರು. ಸಚಿವ ಸ್ಥಾನ, ಪ್ರಮುಖ ಖಾತೆಗಳು ಮತ್ತು ವೈಯಕ್ತಿಕ ಸ್ಥಾನಮಾನಗಳಿಗಾಗಿ ಕಾಂಗ್ರೆಸ್ಸಿಗರು ನಿರಂತರವಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಈ ಆಂತರಿಕ ಅಸಮಾಧಾನ ಮತ್ತು ಅಧಿಕಾರದ ಹಪಾಹಪಿಯೇ ಸಚಿವರೊಬ್ಬರು ರಾಜೀನಾಮೆ ನೀಡಲು ಮುಖ್ಯ ಕಾರಣ ಎಂದು ಅವರು ವಿಶ್ಲೇಷಿಸಿದರು.

ಮಧ್ಯಂತರ ಚುನಾವಣೆಯ ಮುನ್ಸೂಚನೆ

ರಾಜ್ಯದಲ್ಲಿ ಸದ್ಯ ಸೃಷ್ಟಿಯಾಗಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, ಸರ್ಕಾರ ಹೆಚ್ಚು ದಿನ ಉಳಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಕರ್ನಾಟಕದಲ್ಲಿ ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದು ಭವಿಷ್ಯ ನುಡಿದ ಬಿ.ವೈ. ವಿಜೇಂದ್ರ, ಆಡಳಿತ ಪಕ್ಷದೊಳಗಿನ ಭಿನ್ನಮತವೇ ಈ ಸರ್ಕಾರಕ್ಕೆ ಮುಳ್ಳಾಗಲಿದೆ ಎಂಬ ಸುಳಿವು ನೀಡಿದರು.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ