LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿಕೆಐಟಿ ಭಾಲ್ಕಿಯಲ್ಲಿ ವಿವೇಚನಾ ಕನ್ಸ್ಟ್ರಕ್ಷನ್ಸ್ ವತಿಯಿಂದ ಕ್ಯಾಂಪಸ್ ನೇಮಕಾತಿ ಅಭಿಯಾನ

Advertisement


ಭಾಲ್ಕಿ: ನಗರದ ಬಾಲ್ಕಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (BKIT) ಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಜೂನ್ 1, 2026ರಂದು ವಿವೇಚನಾ ಕನ್ಸ್ಟ್ರಕ್ಷನ್ಸ್, ಬೆಂಗಳೂರು ಸಂಸ್ಥೆಯ ಸಹಯೋಗದಲ್ಲಿ ಕ್ಯಾಂಪಸ್ ನೇಮಕಾತಿ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಈ ನೇಮಕಾತಿ ಅಭಿಯಾನವು ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉದ್ಯಮ ಕ್ಷೇತ್ರದ ಪರಿಣಿತರೊಂದಿಗೆ ನೇರವಾಗಿ ಸಂವಾದ ನಡೆಸಲು ಹಾಗೂ ತಮ್ಮ ತಾಂತ್ರಿಕ ಮತ್ತು ವೃತ್ತಿಪರ ಕೌಶಲ್ಯಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸಿತು.
news_1780728660_0_665.webp

 

ನೇಮಕಾತಿ ಪ್ರಕ್ರಿಯೆಯಲ್ಲಿ ಸಂಸ್ಥೆಯ ಪರಿಚಯ ಕಾರ್ಯಕ್ರಮ, ಸಾಮರ್ಥ್ಯ ಪರೀಕ್ಷೆ (Aptitude Test) ಹಾಗೂ ವೈಯಕ್ತಿಕ ಸಂದರ್ಶನಗಳನ್ನು (Personal Interview) ವಿವೇಚನಾ ಕನ್ಸ್ಟ್ರಕ್ಷನ್ಸ್ ಸಂಸ್ಥೆಯ ಪ್ರತಿನಿಧಿಗಳು ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಈ ಕಾರ್ಯಕ್ರಮವು ಶಿಕ್ಷಣ ಸಂಸ್ಥೆ ಮತ್ತು ಉದ್ಯಮ ವಲಯದ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭವಿಷ್ಯದ ಉದ್ಯೋಗಾವಕಾಶಗಳ ದಾರಿಯನ್ನು ತೆರೆದಿದೆ.

ಕಾರ್ಯಕ್ರಮದ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿದ ಕಾಲೇಜಿನ ಪ್ರಾಂಶುಪಾಲರು, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಕ್ಯಾಂಪಸ್ ನೇಮಕಾತಿ ಅಭಿಯಾನವನ್ನು ಆಯೋಜಿಸಿ ವಿದ್ಯಾರ್ಥಿಗಳ ಉದ್ಯೋಗಾವಕಾಶಗಳಿಗೆ ಬೆಂಬಲ ನೀಡಿದ ವಿವೇಚನಾ ಕನ್ಸ್ಟ್ರಕ್ಷನ್ಸ್, ಬೆಂಗಳೂರು ಸಂಸ್ಥೆಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.
news_1780728674_0_195.webp

 


ವರದಿ :ಸಂತೋಷ ಬಿಜಿ ಪಾಟೀಲ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ