LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯದಲ್ಲಿ 4 ಲಕ್ಷ ಪಡಿತರ ಚೀಟಿಗಳ ರದ್ದು : ರಿಜ್ವಾನ್ ಅರ್ಷದ್ 

Advertisement

ಉಡುಪಿ: ರಾಜ್ಯದಲ್ಲಿರುವ ಪಡಿತರ ಚೀಟಿಗಳ ಪೈಕಿ ಸುಮಾರು 7.59 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ.

ಅದರಂತೆ ಇದುವರೆಗೆ ಸುಮಾರು 4 ಲಕ್ಷ ಕಾರ್ಡ್‌ಗಳನ್ನು ರಾಜ್ಯದಲ್ಲಿ ರದ್ದು ಮಾಡಲಾಗಿದ್ದು, ಉಳಿದ 3.59 ಲಕ್ಷ ಕಾರ್ಡ್‌ಗಳ ರದ್ದತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿರುವುದಾಗಿ ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಉಡುಪಿಯ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಾಕಿ ಉಳಿದ ರೇಷನ್ ಕಾರ್ಡ್‌ಗಳನ್ನು ರದ್ದುಗೊಳಿಸುವ ಮುನ್ನ ಪರಿಶೀಲನೆ ನಡೆಸುವ ಅಗತ್ಯವಿದೆ.

ಸದ್ಯಕ್ಕೆ ಯಾವುದೇ ಬಿಪಿಎಲ್ ಕಾರ್ಡ್‌ ರದ್ದುಗೊಳಿಸದಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸರ್ಕಾರದ ಮಟ್ಟದಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದ್ದಾರೆ.

ಪಡಿತರ ಚೀಟಿಗಳ ಇ-ಕೆವೈಸಿ ಮಾಡಿ ಐದು ವರ್ಷವಾಗಿದ್ದು, ರಾಜ್ಯದಲ್ಲಿರುವ ಎಲ್ಲಾ 2.59 ಕೋಟಿ ಪಡಿತರ ಕಾರ್ಡ್‌ ಗಳ ಮರು ಇ-ಕೆವೈಸಿ ಮಾಡುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

ಕಾರ್ಡ್‌ ದಾರರು ಮರಣ ಹೊಂದಿದ್ದರೆ, ಬಡತನ ರೇಖೆಯಿಂದ ಮೇಲೆ ಬಂದಿದ್ದರೆ ಅಥವಾ ಕಾರ್ಡ್ ಅಗತ್ಯ ಇಲ್ಲದೆ ಇರುವವರಿದ್ದರೆ ಅವರ ಡಾಟಾ ಕೆವೈಸಿ ಮೂಲಕ ಲಭ್ಯವಾಗಲಿದೆ. 

ಈ ಮಾಹಿತಿಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮರು ಕೆವೈಸಿ ಮಾಡಿಸಿಕೊಳ್ಳಲು ಸೆ.30ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್