LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಿರುದ್ಯೋಗಿ ಎಂದು ಪತ್ನಿಗೆ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ : ಹೈಕೋರ್ಟ್

Advertisement

ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿ, ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

 

ಪತ್ನಿಯು ಉದ್ಯೋಗದಲ್ಲಿದ್ದರೂ ಸಹ, ಮದುವೆಯ ನಂತರ ಪತಿಯ ಮನೆಯಲ್ಲಿ ಅನುಭವಿಸುತ್ತಿದ್ದ ಜೀವನಮಟ್ಟವನ್ನು ಕಾಪಾಡಿಕೊಳ್ಳಲು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುತ್ತಾಳೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

 

ಈ ಹಿಂದೆ ದಂಪತಿಗಳು ಬೇರೆ ಬೇರೆಯಾಗಿದ್ದು, 2021ರಲ್ಲಿ ವಿವಾಹವಾಗಿದ್ದರು. ಆದರೆ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ 2022ರಲ್ಲಿ ಪತ್ನಿ ಜೀವನಾಂಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 20 ಸಾವಿರ ರೂ. ಜೀವನಾಂಶ ನೀಡುವಂತೆ ಮಧ್ಯಂತರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಪತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

 

2023ರಲ್ಲಿ ಕೆಲಸ ಕಳೆದುಕೊಂಡಿದ್ದು, ಪ್ರಸ್ತುತ ನಿರುದ್ಯೋಗಿಯಾಗಿದ್ದೇನೆ. ತಂದೆ-ತಾಯಿಯ ಪಿಂಚಣಿ ಮತ್ತು ಉಳಿತಾಯದ ಹಣದಲ್ಲಿ ಜೀವನ ನಡೆಸುತ್ತಿದ್ದೇನೆ. ಪತ್ನಿಯು ಪದವೀಧರೆಯಾಗಿದ್ದು, ಸ್ವಂತ ಆದಾಯ ಹೊಂದಿರುವುದರಿಂದ ಆಕೆಗೆ ಜೀವನಾಂಶದ ಅಗತ್ಯವಿಲ್ಲ.ನ್ಯಾಯಮೂರ್ತಿ ಡಾ. ಕೆ. ಮನ್ಮಥ ರಾವ್ ಅವರಿದ್ದ ಏಕಸದಸ್ಯ ಪೀಠವು ಪತಿಯ ಅರ್ಜಿಯನ್ನು ವಜಾಗೊಳಿಸಿದ್ದು, ಪತ್ನಿಯು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ತಿಂಗಳಿಗೆ 40 ಸಾವಿರ ರೂ. ಗಿಂತ ಹೆಚ್ಚು ವೇತನ ಪಡೆಯುತ್ತಿರುವುದು ನಿಜ. ಆದರೆ, ಪತಿಯು ಹಿಂದೆ ಕೆಲಸ ಮಾಡುತ್ತಿದ್ದಾಗ ತಿಂಗಳಿಗೆ ಸುಮಾರು 4.50 ಲಕ್ಷ ರೂ. ಸಂಬಳ ಪಡೆಯುತ್ತಿದ್ದನು. ಆತನ ವಾರ್ಷಿಕ ಆದಾಯ 66 ಲಕ್ಷ ರೂ.ಗೂ ಅಧಿಕವಾಗಿತ್ತು.

 

ಪತಿಯ ಐಷಾರಾಮಿ ಜೀವನಮಟ್ಟಕ್ಕೆ ಹೋಲಿಸಿದರೆ ಪತ್ನಿಯ ವೇತನ ಅತ್ಯಲ್ಪವಾಗಿದೆ. ಈ ಜೀವನಮಟ್ಟದ ಅಂತರವನ್ನು ಸರಿದೂಗಿಸಲು ಜೀವನಾಂಶ ಅತ್ಯಗತ್ಯ. ಆರೋಗ್ಯವಂತ ಪತಿಯು ಕೆಲಸವಿಲ್ಲ ಎಂಬ ನೆಪ ಹೇಳಿ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಹೈಕೋರ್ಟ್ ಇಲ್ಲಿ ನೆನಪಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್