LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು 

Advertisement

ಧಾರವಾಡ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಬಳಿ ನಡೆದಿದೆ.

ಧಾರವಾಡ ತಾಲೂಕಿನ ಹಳೇ ತೇಗೂರಿನ ಷಣ್ಮುಖ ಜೋಗಿ(28), ಉತ್ತರ ಪ್ರದೇಶ ಮೂಲದ ಸಾಗರ್​(30) ಮೃತ ದುರ್ದೈವಿಗಳು.ಘಟನಾ ಸ್ಥಳಕ್ಕೆ ಗರಗ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಟೈರ್ ಬ್ಲಾಸ್ಟ್‌ ಆಗಿದ್ದ ಹಿನ್ನೆಲೆಯಲ್ಲಿ ರಸ್ತೆ ಬದಿ ಲಾರಿ ನಿಲ್ಲಿಸಿ ಚಾಲಕ ಟೈರ್​​ ಬದಲಿಸುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕ್ಯಾಂಟರ್​​ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST