LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತಾಲೂಕು ಆಡಳಿತ, ಬಲಿಜ ಸಂಘದಿಂದ ಕೈವಾರ ತಾತಯ್ಯರ ಜಯಂತಿ ಆಚರಣೆ

Advertisement
ತುರುವೇಕೆರೆ: ಕೈವಾರತಾತಯ್ಯ ಅವರು ನಾಡಿಗೆ ಸ್ಫೂರ್ತಿ. ಅವರು ದಿವ್ಯ ತೇಜಸ್ವಿಯಾಗಿ ಮನುಕುಲದ ಏಕತೆಗೆ ಶ್ರಮಿಸಿದ ಮಹಾನ್ ದಾರ್ಶನಿಕರು ಎಂದು ತಹಸೀಲ್ದಾರ್ ಕುಂಇ ಅಹಮದ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ತಾಲೂಕು ಆಡಳಿತ, ತಾಲೂಕು ಬಲಿಜ ಸಂಘ ಆಶ್ರಯದಲ್ಲಿ ನಡೆದ ಕೈವಾರದ ತಾತಯ್ಯ ಎಂದೇ ಪ್ರಸಿದ್ಧರಾದ ಶ್ರೀ ಯೋಗಿನಾರೇಯಣರ 300 ನೇ ಜಯಂತಿ ಆಚರಣೆಯಲ್ಲಿ ತಾತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.



ತಾತಯ್ಯನವರು ತಮ್ಮ ಭೋದನೆಗಳು, ಕೀರ್ತನೆಗಳ ಮೂಲಕ ಮನುಕುಲದ ಉದ್ದಾರಕ್ಕೆ ಶ್ರಮಿಸಿದರು. ಅಂತಿಮವಾಗಿ ಕೈವಾರದಲ್ಲಿ ತಮ್ಮ ಗುರುಪೀಠವನ್ನು ಸ್ಥಾಪಿಸಿ ಅಲ್ಲಿಂದಲೇ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯದಲ್ಲಿ ನಿರತರಾದರು. ಇಂದಿಗೂ ತಾತಯ್ಯನವರ ಜಯಂತಿಯಂದು ಸಹಸ್ರಾರು ಮಂದಿ‌ ಕೈವಾರಕ್ಕೆ ತೆರಳಿ ತಮ್ಮ ಭಕ್ತಿ ಸಮರ್ಪಣೆ ಮಾಡುತ್ತಾರೆ ಎಂದರು. ತಾತಯ್ಯನವರ ತತ್ವಪದಗಳು ಇಂದಿಗೂ ಪ್ರಸ್ತುತ. ಅವರ ಕೀರ್ತನೆಗಳು ಮಾರ್ಗದರ್ಶನ ಮಾಡುತ್ತವೆ. ಅವರ ತತ್ವ, ಆದರ್ಶದ ಮೇಲೆ ನಮ್ಮ ಬದುಕನ್ನು ರೂಪಿಸಿಕೊಳ್ಳಬೇಕಿದೆ ಎಂದರು.



ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ಸುಮತಿ, ಶಿರಸ್ತೇದಾರ್ ಸುನಿಲ್ ಕುಮಾರ್, ಆರೋಗ್ಯ ವೈದ್ಯಾಧಿಕಾರಿ ಡಾ.ರಂಗನಾಥ್, ಬಲಿಜ ಸಂಘದ ಅಧ್ಯಕ್ಷ ಬಿ.ನಂಜುಂಡಯ್ಯ, ಉಪಾಧ್ಯಕ್ಷ ಯೋಗೀಶ್, ಪ್ರಧಾನ ಕಾರ್ಯದರ್ಶಿ ರಮೇಶ್, ಸಹಕಾರ್ಯದರ್ಶಿ ಗೋಪಾಲಕೃಷ್ಣ, ಸದಸ್ಯರಾದ ರಾಘವೇಂದ್ರ, ಪ್ರಕಾಶ್, ರಾಘವೇಂದ್ರ ಟಿ.ಜಿ., ವಾಲ್ಮೀಕಿ ಸಮಾಜದ ವಸಂತಕುಮಾರ್, ದಲಿತ ಮುಖಂಡ ಕೃಷ್ಣಮೂರ್ತಿ ಸೇರಿದಂತೆ ಸಾಕಷ್ಟು ಮಂದಿ ಉಪಸ್ಥಿತರಿದ್ದರು

ವರದಿ: ಗಿರೀಶ್ ಕೆ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ