LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಛಲವಾದಿ ನಾರಾಯಣಸ್ವಾಮಿ, ಯತ್ನಾಳ್ ದ್ವೇಷ ಭಾಷಣದ ಪಿತಾಮಹರು : ಪ್ರದೀಪ್ ಈಶ್ವರ್ 

Advertisement

ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದ್ವೇಷ ಭಾಷಣ ಆರೋಪ ಮಾಡಿ ಬಿಜೆಪಿ ನಾಯಕ ಛಲವಾದಿ ನಾಅರಾಯಣಸ್ವಾಮಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. 

ಇದೇ ವಿಚಾರವಾಗಿ ಸ್ವತಃ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕಿಡಿಕಾರುವ ಜೊತೆಗೆ ಶಾಸಕ ಯತ್ನಾಳ್ ಅವರನ್ನೂ ಬೈದಿದ್ದಾರೆ.

ತಮ್ಮನ್ನು ದೇಶದ್ರೋಹಿ ಎಂದಿರುವುದರ ಜತೆಗೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದು ದೂರು ನೀಡಿದ್ದಾರೆ. 

ನಾನು ಯಾವುದೇ ದ್ವೇಷ ಭಾಷಣ ಮಾಡಿಲ್ಲ. ಅಲ್ಲದೆ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ವಾಗ್ದಾಳಿ ನಡೆಸಿದರು.

ಛಲವಾದಿ ನಾರಾಯಣಸ್ವಾಮಿ ಅವರನ್ನು ಇಷ್ಟುದಿನ ಬುದ್ಧಿವಂತರು ಮತ್ತು ಪ್ರಜ್ಞಾವಂತರು ಎಂದು ಭಾವಿಸಿದ್ದೆ. ಆದರೆ, ಅವರು ನೀಡಿದ ದೂರು ನೋಡಿದ ನಂತರ ಅವರಿಗೆ ಜ್ಞಾನವಿಲ್ಲ ಎಂದು ಅನಿಸುತ್ತಿದೆ. 

ಭಾಷಣದ ವೀಡಿಯೊವನ್ನು ನೋಡದೆ ಹೋಮ್ ಮಿನಿಸ್ಟರ್ ಮತ್ತು ಸಿಎಂ ಅವರಿಗೆ ಪತ್ರ ಬರೆಯುವುದು ಸರಿಯಲ್ಲ. ವಿಡಿಯೋದಲ್ಲಿ, ನಾನು ಏನು ಹೇಳಿದ್ದೇನೆ? ಅದು ದ್ವೇಷ ಭಾಷಣ ಹೇಗೆ ಆಗಲು ಸಾಧ್ಯ? ಅಂಧಭಕ್ತರು ಮತ್ತು ದೇಶದ್ರೋಹಿಗಳು ಈ ದೇಶಕ್ಕೆ ಮಾರಕ' ಎಂದು ಹೇಳಿದ್ದೇನೆ. 

ಅದರಲ್ಲಿ ತಪ್ಪೇನಿದೆ? ನಾನು ಯಾರನ್ನೂ ನಿರ್ದಿಷ್ಟವಾಗಿ ದೇಶದ್ರೋಹಿಗಳು ಎಂದು ಕರೆದಿಲ್ಲ. ಹೀಗಿರುವಾಗ ಛಲವಾದಿ ನಾರಾಯಣಸ್ವಾಮಿ ಅದನ್ನು ತಮಗೇ ಹೇಳಿದ್ದು ಎಂದು ಯಾಕೆ ಅಂದುಕೊಂಡಿದ್ದಾರೆ? ಎಂದು ಪ್ರಶ್ನಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ