ಸಿಂಧನೂರು : ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ದೌರ್ಜನ್ಯ ಹಾಗೂ ಸಾಮಾಜಿಕ ಬಹಿಷ್ಕಾರ ಖಂಡಿಸಿ ನವಂಬರ್ 8ರಂದು ರಾಯಚೂರು ಜಿಲ್ಲಾದ್ಯಂತ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ತಿಡಿಗೋಳ ಚಲೋ' ಹಾಗೂ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ದಲಿತ ಮುಖಂಡ ಅಂಬಣ್ಣ ಆರೋಲ್ಕರ್ ಕರೆ ನೀಡಿದರು
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಡಿಗೋಳ ಗ್ರಾಮದಲ್ಲಿ ಅಂಜನೇಯ ಸ್ವಾಮಿ ಜಾತ್ರೆಯ ಸಂದರ್ಭದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ದಲಿತ ಮೇಲೆ ದೌರ್ಜನ್ಯ ಎಸಗಲಾಗಿದೆ ಜಾತಿ ಸಂಘರ್ಷ ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುತ್ತಿದ್ದು, ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ತಕ್ಷಣ ಮಧ್ಯಪ್ರವೇಶಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಒತ್ತಾಯಿಸಿದರು.
ಸಮುದಾಯದ 'ದಲಿತ ಹಕ್ಕುಗಳ ರಕ್ಷಣೆ ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಬೃಹತ್ ಜಾಥಾ ಪ್ರತಿಭಟನೆ ಆಯೋಜಿಸಲಾಗಿದೆ. ವಿವಿಧ ದಲಿತಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ: ಬಹುಜನ ಜಾಗೃತಿ ಕ್ರಾಂತಿಕಾರಿ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಸೋಲಂಗಿ. ದಲಿತ ಸೇನೆ ತಾಲೂಕ ಅಧ್ಯಕ್ಷ ಅಶೋಕ್ ಮ್ಯಾಗಳಮನಿ. ಮುಖಂಡರಾದ ಮುತ್ತುಸಾಗರ ಮಂಜುನಾಥ್ ಗೊರೆಬಾಳ ಇತರರು ಇದ್ದರು,
ವರದಿ : ಬಸವರಾಜ ಬುಕ್ಕನಹಟ್ಟಿ


