LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ : ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ 

Advertisement

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ (89) ಅವರ ಪಾರ್ಥಿವ ಶರೀರವು ಸೋಮವಾರ ಅವರ ಹುಟ್ಟೂರಾದ ಹಾಸನ ಜಿಲ್ಲೆಯ ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಪಂಚಭೂತಗಳಲ್ಲಿ ಲೀನವಾಯಿತು. ಸಕಲ ಸರ್ಕಾರಿ ಮರ್ಯಾದೆ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಾರ್ವಜನಿಕರು ಮತ್ತು ಗಣ್ಯರ ಸಮ್ಮುಖದಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.

ರಾಷ್ಟ್ರಗೀತೆ ನಮನ ಮತ್ತು ಕುಶಾಲತೋಪು ಗೌರವ

ಅಂತಿಮ ಸಂಸ್ಕಾರದ ಮುನ್ನ ನೆರೆದಿದ್ದ ಗಣ್ಯರೆಲ್ಲರೂ ಮೃತರ ದೇಹಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

 ಆನಂತರ ಸಶಸ್ತ್ರ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಕುಶಾಲತೋಪು ಸಿಡಿಸಿದರು. ರಾಷ್ಟ್ರಗೀತೆಯ ನಮನದೊಂದಿಗೆ ಸಕಲ ಸರ್ಕಾರಿ ಗೌರವ ವಂದನೆಯನ್ನು ಅರ್ಪಿಸಲಾಯಿತು.

 ಮೃತರ ಗೌರವಾರ್ಥ ಎರಡು ನಿಮಿಷಗಳ ಕಾಲ ಮೌನಾಚರಣೆ ಸಹ ಆಚರಿಸಲಾಯಿತು. ತದನಂತರ ಮುಖ್ಯಮಂತ್ರಿಗಳು (ಅಧಿಕೃತ ಆದೇಶದ ಶಿಷ್ಟಾಚಾರದಂತೆ) ದೇವೇಗೌಡರ ಕುಟುಂಬಸ್ಥರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು.

 ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.

ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳ ಪ್ರಕ್ರಿಯೆ ಮುಗಿದ ಬಳಿಕ ದೇಹ ಶುದ್ಧಿ ಕಾರ್ಯವನ್ನು ನೆರವೇರಿಸಲಾಯಿತು. ಮಾಜಿ ಪ್ರಧಾನಿ ದೇವೇಗೌಡರು ಮತ್ತು ಅವರ ಕುಟುಂಬ ಸದಸ್ಯರು ಪಾರ್ಥಿವ ಶರೀರಕ್ಕೆ ಕೊನೆಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. 

ಅರ್ಚಕರ ತಂಡದಿಂದ ಶಾಸ್ತ್ರೋಕ್ತವಾಗಿ ಸ್ತೋತ್ರ ಪಠಣ ಕಾರ್ಯ ಜರುಗಿತು. ನಂತರ ಪಾರ್ಥಿವ ಶರೀರವನ್ನು ಪಲ್ಲಕ್ಕಿಯಲ್ಲಿರಿಸಿ ಮೂರು ಸುತ್ತು ಪ್ರದಕ್ಷಿಣೆ ನಡೆಸಿ, ಒಕ್ಕಲಿಗ ಸಂಪ್ರದಾಯದ ಪ್ರಕಾರ ಅಂತಿಮ ಸಂಸ್ಕಾರದ ಪ್ರಕ್ರಿಯೆಗಳನ್ನು ಪೂರೈಸಲಾಯಿತು. 

ದೇವೇಗೌಡರ ಹಿರಿಯ ಪುತ್ರ ಹೆಚ್.ಡಿ. ರಮೇಶ್ ಅವರು ಅಂತ್ಯಕ್ರಿಯೆಯ ಸಂಪೂರ್ಣ ನೇತೃತ್ವ ವಹಿಸಿ ಕಾರ್ಯವಿಧಾನಗಳನ್ನು ನೆರವೇರಿಸಿದರು. ಚಿತೆಯ ಗುಂಡಿಗೆ ಗಂಗಾಜಲ ಸಿಂಪಡಿಸಿ ಶುದ್ಧೀಕರಣ ಮಾಡಿದ ನಂತರ, ಪಲ್ಲಕ್ಕಿಯಲ್ಲಿ ತರಲಾಗಿದ್ದ ಪಾರ್ಥಿವ ಶರೀರವನ್ನು ಇಳಿಸಿ ಅಂತ್ಯಕ್ರಿಯೆ ಪೂರೈಸಲಾಯಿತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST